ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಗ್ನಿಶಾಮಕ ಕೇಂದ್ರಕ್ಕೆ ಚಾಲನೆ

Last Updated 30 ಆಗಸ್ಟ್ 2018, 18:21 IST
ಅಕ್ಷರ ಗಾತ್ರ

ಬೆಂಗಳೂರು: ‘ಬೆಂಗಳೂರು ಅಭಿವೃದ್ಧಿಗೆ ಖಾಸಗಿ ಸಹಭಾಗಿತ್ವ ಅಗತ್ಯವಾಗಿದೆ’ ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಹೇಳಿದರು.

ವೈಟ್‌ಫೀಲ್ಡ್‌ ಇಪಿಐಪಿ ಬಳಿ ನೆಟ್ಆಫ್‌ ಸಂಸ್ಥೆ ವತಿಯಿಂದ ನಿರ್ಮಿಸಿರುವ ನೂತನ ಅಗ್ನಿಶಾಮಕ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.‘5200 ಚದರ ಅಡಿ ವಿಸ್ತೀರ್ಣದಲ್ಲಿ ₹ 2 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಅಗ್ನಿಶಾಮಕ ಕೇಂದ್ರ ಕಟ್ಟಲಾಗಿದೆ. ಇದರಿಂದ ವೈಟ್‌ಫೀಲ್ಡ್‌, ಕಾಡುಗೋಡಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಗ್ನಿ ಅವಘಡಗಳು ಸಂಭವಿಸಿದಾಗ ತುರ್ತಾಗಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಬಹುದು. ಹೆಚ್ಚಿನ ಅನಾಹುತಗಳು ಸಂಭವಿಸದಂತೆ ತಡೆಗಟ್ಟಲು ಸಾದ್ಯವಾಗಲಿದೆ’ ಎಂದು ಹೇಳಿದರು.

‘ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ನಗರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಹೆಚ್ಚುವರಿಯಾಗಿ 5 ಸಾವಿರ ಕ್ಯಾಮೆರಾಗಳನ್ನು ಅಳವಡಿಸಲು ಚಿಂತನೆ ನಡೆಸಲಾಗುತ್ತಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT