ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜರಗನಹಳ್ಳಿ ಕೆರೆ ಪ್ರದೇಶದಲ್ಲಿ ಸುರಿಯಲಾಗಿದ್ದ ತ್ಯಾಜ್ಯಕ್ಕೆ ಬೆಂಕಿ

Last Updated 7 ಜನವರಿ 2022, 19:12 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಕನಕಪುರ ರಸ್ತೆಯಲ್ಲಿ ಜರಗನಹಳ್ಳಿ ಕೆರೆ ಪ್ರದೇಶದಲ್ಲಿ ಸುರಿಯಲಾಗಿದ್ದ ಗುರುವಾರ ರಾತ್ರಿ ಬೆಂಕಿ ಹೊತ್ತಿಕೊಂಡು ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ಸುಮಾರು ಒಂದು ಎಕರೆ ಪ್ರದೇಶದಲ್ಲಿ ಬೆಂಕಿ ವ್ಯಾಪಿಸಿಕೊಂಡಿತ್ತು. ರಾತ್ರಿ ಸುಮಾರು 10 ಗಂಟೆಗೆ ಬೆಂಕಿ ಕಾಣಿಸಿಕೊಂಡಿತು. ಬೆಂಕಿಯ ಜ್ವಾಲೆಗಳು ಇಡೀ ಪ್ರದೇಶವನ್ನು ಆವರಿಸಿಕೊಂಡಿತ್ತು. ಅಗ್ನಿಶಾಮಕ ಮತ್ತು ತುರ್ತು ಸೇವೆ ಸಿಬ್ಬಂದಿ ಬೆಂಕಿ ನಂದಿಸಲು ಅರ್ಧ ಗಂಟೆಗೂ ಹೆಚ್ಚು ಸಮಯ ತೆಗೆದುಕೊಂಡರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

‘ಈ ಕೆರೆ ಒಟ್ಟು ಆರು ಎಕರೆ ಪ್ರದೇಶ ಹೊಂದಿದೆ. ಹಲವು ವರ್ಷಗಳಿಂದ ತ್ಯಾಜ್ಯಗಳನ್ನು ಕೆರೆ ಆವರಣದಲ್ಲಿ ಸುರಿಯಲಾಗುತ್ತಿದೆ. ಇದರಿಂದ, ಸುಮಾರು 25 ಲಾರಿಯಷ್ಟು ತ್ಯಾಜ್ಯ ಇದೆ. ಕಟ್ಟಡ ತ್ಯಾಜ್ಯವನ್ನು ಸಹ ಇಲ್ಲಿ ಹಾಕಲಾಗಿದೆ. ಕೆರೆ ಒತ್ತುವರಿ ತೆರವುಗೊಳಿಸಿ ಸಂರಕ್ಷಣೆಗೆ ಜಿಲ್ಲಾಡಳಿತ ಕ್ರಮಕೈಗೊಳ್ಳಬೇಕು‌’ ಎಂದು ಚೇಂಜ್ ಮೇಕರ್ಸ್‌ ಆಫ್ ಕನಕಪುರ ರೋಡ್‌ನ ಅಧ್ಯಕ್ಷ ಅಬ್ದುಲ್ ಅಲೀಂ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT