ಬೆಂಗಳೂರು: ಮತ್ತಿಕೆರೆಯಲ್ಲಿ ಇರುವ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಗುರುವಾರ ಮಧ್ಯಾಹ್ನ ಬೆಂಕಿ ಅವಘಡ ಸಂಭವಿಸಿದ್ದು ಮೂವರ ಕೈಗೆ ಸಣ್ಣಪುಟ್ಟ ಗಾಯವಾಗಿದೆ.
ಎರಡು ಅಗ್ನಿಶಾಮಕ ದಳದ ವಾಹನದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ. ಬೆಂಕಿ ನಿಯಂತ್ರಣಕ್ಕೆ ಬರುತ್ತಿದೆ. ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ರೋಗಿಗಳನ್ನು ಬೇರೆಡೆಗೆ ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ. ಎಸಿಯಲ್ಲಿ ಉಂಟಾದ ಶಾರ್ಟ್ ಸಕೀರ್ಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಇನ್ನೂ ನಿಖರ ಕಾರಣ ಗೊತ್ತಾಗಿಲ್ಲ ಎಂದು ಅಗ್ನಿಶಾಮಕದ ದಳದ ಸಿಬ್ಬಂದಿ ತಿಳಿಸಿದ್ದಾರೆ.