ಮಂಗಳವಾರ, ಜನವರಿ 26, 2021
16 °C

ಮೆಟ್ರೊ ಕಾಮಗಾರಿ ಸ್ಥಳದಲ್ಲಿ ಬೆಂಕಿ ಅವಘಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮೆಟ್ರೊ ಕಾಮಗಾರಿಗೆ ಬೇಕಾಗುವ ಸಾಮಗ್ರಿಗಳನ್ನು ಸಂಗ್ರಹಿಸಿಟ್ಟಿದ್ದ ಗೋದಾಮಿನಲ್ಲಿ ಶನಿವಾರ ಬೆಂಕಿ ಅವಘಡ ಸಂಭವಿಸಿದೆ.

‘ಲಕ್ಕಸಂದ್ರ ಬಳಿ ಗೋದಾಮು ಇದೆ. ರಾಸಾಯನಿಕ ವಸ್ತುಗಳು ಹಾಗೂ ಬಣ್ಣ ಬಳೆಯುವ ಸಾಮಗ್ರಿಗಳನ್ನು ಸಂಗ್ರಹಿಸಿಡಲಾಗಿತ್ತು. ಅದೇ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡು, ಹೊತ್ತಿ ಉರಿದಿದೆ’ ಎಂದು ಅಗ್ನಿಶಾಮಕ ದಳದ ಮೂಲಗಳು ಹೇಳಿವೆ.

‘ಗೋದಾಮಿನಲ್ಲಿ ಬೆಂಕಿಯ ಜ್ವಾಲೆ ಹೆಚ್ಚಾಗಿತ್ತು. ಐದು ವಾಹನಗಳ ಸಮೇತ ಸ್ಥಳಕ್ಕೆ ಹೋಗಿ ಬೆಂಕಿ ನಂದಿಸಲಾಗಿದೆ. ಹಾನಿ ಪ್ರಮಾಣ ಎಷ್ಟು ಎಂಬುದು ಗೊತ್ತಾಗಿಲ್ಲ. ಬೆಂಕಿ ಹೊತ್ತಿಕೊಳ್ಳಲು ಕಾರಣವೂ ತಿಳಿದುಬಂದಿಲ್ಲ’ ಎಂದೂ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು