ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ಲಾಸ್ಟಿಕ್ ಉತ್ಪನ್ನಗಳ ಗೋದಾಮಿಗೆ ಬೆಂಕಿ

Last Updated 23 ಏಪ್ರಿಲ್ 2020, 19:31 IST
ಅಕ್ಷರ ಗಾತ್ರ

ಬೆಂಗಳೂರು: ಕೂಡ್ಲು ಗೇಟ್ ಬಳಿ ಗುರುವಾರ ಬೆಳಿಗ್ಗೆ ಬೆಂಕಿ ಅವಘಡ ಸಂಭವಿಸಿದ್ದು, ಪ್ಲಾಸ್ಟಿಕ್ ಉತ್ಪನ್ನಗಳಿದ್ದ ಗೋದಾಮು ಬೆಂಕಿಗೆ ಆಹುತಿಯಾಗಿವೆ.

ಗೋದಾಮಿನಲ್ಲಿ ಪ್ಲಾಸ್ಟಿಕ್‌ ಕ್ಯಾನ್‌ಗಳು, ಬಾಟಲಿಗಳು ಹಾಗೂ ಇತರೆ ಉತ್ಪನ್ನಗಳನ್ನು ಸಂಗ್ರಹಿಸಲಾಗಿತ್ತು. ಬೆಳಿಗ್ಗೆ 11.30ರ ಸುಮಾರಿಗೆ ಗೋದಾಮಿನಲ್ಲಿ ಸಣ್ಣದಾಗಿ ಕಾಣಿಸಿಕೊಂಡಿದ್ದ ಬೆಂಕಿ, ಕೆಲ ನಿಮಿಷಗಳಲ್ಲೇ ಗೋದಾಮು ಪೂರ್ತಿಯಾಗಿ ಆವರಿಸಿತ್ತು.

ಇಡೀ ಗೋದಾಮು ಹೊತ್ತಿ ಉರಿಯುತ್ತಿದ್ದ ದೃಶ್ಯ ದೂರದವರೆಗೂ ಕಾಣುತ್ತಿತ್ತು. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ, ಸಂಜೆಯರೆಗೂ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು.

‘ಬೆಂಕಿ ಕೆನ್ನಾಲಗೆ ಹೆಚ್ಚಿತ್ತು. ಅಕ್ಕ–ಪಕ್ಕದ ಗೋದಾಮುಗಳಿಗೂ ಬೆಂಕಿ ತಗಲುವ ಸಾಧ್ಯತೆ ಇತ್ತು. ವಿಷಯ ಗೊತ್ತಾಗುತ್ತಿದ್ದಂತೆ ಬನಶಂಕರಿ, ಹುಳಿಮಾವು, ಎಲೆಕ್ಟ್ರಾನಿಕ್ ಸಿಟಿ ಅಗ್ನಿಶಾಮಕ ದಳದ ಕಚೇರಿ ಸಿಬ್ಬಂದಿಯನ್ನು ಸ್ಥಳಕ್ಕೆ ಕಳುಹಿಸಿ ಬೆಂಕಿ ನಂದಿಸಲಾಗಿದೆ’ ಎಂದು ಅಗ್ನಿಶಾಮಕ ದಳದ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT