ಬುಧವಾರ, ಜನವರಿ 27, 2021
18 °C

ಐಪಿಎಸ್ ಅಧಿಕಾರಿಗಳ ವಸತಿ ಸಮುಚ್ಚಯದಲ್ಲಿ ಬೆಂಕಿ ಅವಘಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಸಂತನಗರದಲ್ಲಿರುವ ಐಪಿಎಸ್ ಅಧಿಕಾರಿಗಳ ವಸತಿಸಮುಚ್ಚಯದಲ್ಲಿ ಗುರುವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿ ಅನಾಹುತ ತಪ್ಪಿಸಿದ್ದಾರೆ.

‘ನಗರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹಲವು ಐಪಿಎಸ್ ಅಧಿಕಾರಿಗಳು ಹಾಗೂ ಅವರ ಕುಟುಂಬದವರು ವಸತಿ ಸಮುಚ್ಚಯದಲ್ಲಿ ವಾಸವಿದ್ದಾರೆ. ಅಲ್ಲಿಯ ಲಿಫ್ಟ್‌ನಲ್ಲಿ ವಿದ್ಯುತ್ ಶಾರ್ಟ್‌ ಸರ್ಕೀಟ್‌ ಉಂಟಾಗಿ ಬೆಂಕಿ ಕಾಣಿಸಿಕೊಂಡಿತ್ತು’ ಎಂದು ಅಗ್ನಿಶಾಮಕ ದಳದ ಮೂಲಗಳು ತಿಳಿಸಿವೆ.

‘ಒಂದನೇ ಮಹಡಿಯಿಂದ ನಾಲ್ಕನೇ ಮಹಡಿವರೆಗಿನ ಲಿಫ್ಟ್‌ ಭಾಗದಲ್ಲಿ ಬೆಂಕಿ ಹೊತ್ತಿ ಉರಿಯಿತು. ಸ್ಥಳಕ್ಕೆ ಹೋಗಿ ಬೆಂಕಿ ನಂದಿಸಲಾಯಿತು. ಲಿಫ್ಟ್‌ ಪ್ರದೇಶ ಬಿಟ್ಟರೆ, ಬೇರೆ ಯಾವ ಭಾಗದಲ್ಲೂ ಬೆಂಕಿಯಿಂದ ಹಾನಿಯಾಗಿಲ್ಲ’ ಎಂದೂ ಹೇಳಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು