ಮಂಗಳವಾರ, ಜನವರಿ 21, 2020
28 °C

ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷನ ಮನೆ, ಬೈಕ್‌ಗೆ ಬೆಂಕಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಾಗಲಗುಂಟೆ ಬಳಿಯ ಶೆಟ್ಟಿಹಳ್ಳಿಯಲ್ಲಿರುವ ದಾಸರಹಳ್ಳಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ನರಸಿಂಹಮೂರ್ತಿ ಅವರ ಮನೆ ಮತ್ತು ಬೈಕ್‌ಗೆ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.

ದುಷ್ಕರ್ಮಿಗಳ ಕೃತ್ಯದಿಂದ ಬೈಕ್ ಸುಟ್ಟು ಕರಕಲಾದರೆ, ಮನೆಯ ಕಿಟಿಕಿ, ಬಾಗಿಲಿಗೆ ಹಾನಿಯಾಗಿದೆ. ಮನೆಯಲ್ಲಿದ್ದವರು ಪಾರಾಗಿದ್ದಾರೆ.

ಸ್ಥಳಕ್ಕೆ ಉತ್ತರ ವಿಭಾಗದ ಡಿಸಿಪಿ ಶಶಿಕುಮಾರ್ ಮತ್ತು ಬಾಗಲಗುಂಟೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ನರಸಿಂಹಮೂರ್ತಿ ಅವರ ಮಗಳಿಗೆ ಬೆದರಿಕೆ ಹಾಕುವ ಉದ್ದೇಶದಿಂದ ಕಿಡಿಗೇಡಿಗಳು ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.

‘ಸ್ಥಳದಲ್ಲಿ ಪತ್ರವೊಂದು ಸಿಕ್ಕಿದೆ. ಅದರಲ್ಲಿ ನರಸಿಂಹಮೂರ್ತಿ ಮಗಳಿಗೆ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದಾರೆ. ಆ ಪತ್ರದ ಆಧಾರದಲ್ಲಿ ತನಿಖೆ ನಡೆಯುತ್ತಿದೆ’ ಎಂದು ಪೊಲೀಸರು ತಿಳಿಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು