ಸೋಮವಾರ, ಅಕ್ಟೋಬರ್ 18, 2021
22 °C

ಬೆಂಗಳೂರು: ‘ಹೊಂಡಾ ಅಮೇಜ್’ ಕಾರಿಗೆ ಬೆಂಕಿ; ಚಾಲಕ ಪಾರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಜ್ಞಾನಭಾರತಿ ಠಾಣೆ ವ್ಯಾಪ್ತಿಯಲ್ಲಿ ಚಲಿಸುತ್ತಿದ್ದ ಹೊಂಡಾ ಅಮೇಜ್ ಕಾರಿಗೆ ಬೆಂಕಿ ತಗುಲಿದ್ದು, ನಡುರಸ್ತೆಯಲ್ಲೇ ಕಾರು ಹೊತ್ತಿ ಉರಿದಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಿಂದ ಇಳಿದು ಚಾಲಕ ನಟರಾಜ್ ಅಪಾಯದಿಂದ ಪಾರಾಗಿದ್ದಾರೆ.

‘ಸಂಬಂಧಿಕರನ್ನು ನೋಡಲು ನಟರಾಜ್ ತಮ್ಮ ಹೊಂಡಾ ಅಮೇಜ್ ಕಾರಿನಲ್ಲಿ ಹೊರಟಿದ್ದರು. ದೊಡ್ಡಬಸ್ತಿ ಮುಖ್ಯರಸ್ತೆಯಲ್ಲಿ ಕಾರಿನಲ್ಲಿ ಹೊಗೆ ಕಾಣಿಸಿಕೊಂಡು ಬೆಂಕಿ ಉರಿಯಲಾರಂಭಿಸಿತ್ತು. ಗಾಬರಿಗೊಂಡ ನಟರಾಜ್, ಕಾರನ್ನು ರಸ್ತೆಯಲ್ಲೇ ನಿಲ್ಲಿಸಿ ಇಳಿದಿದ್ದರು’ ಎಂದು ಪೊಲೀಸರು ಹೇಳಿದರು.

‘ಸ್ಥಳಕ್ಕೆ ಹೋಗಿದ್ದ ಗಸ್ತು ಸಿಬ್ಬಂದಿ, ಕಾರಿನ ಬಳಿ ಸಾರ್ವಜನಿಕರ ಓಡಾಟವನ್ನು ನಿರ್ಬಂಧಿಸಿದ್ದರು. ನಾಗರಬಾವಿ ಅಗ್ನಿಶಾಮಕ ದಳದ ಸಿಬ್ಬಂದಿ ಕಾರಿಗೆ ತಗುಲಿದ್ದ ಬೆಂಕಿ ನಂದಿಸಿದರು. ಅಷ್ಟರಲ್ಲೇ ಕಾರು ಸಂಪೂರ್ಣ ಸುಟ್ಟಿದೆ’ ಎಂದೂ ತಿಳಿಸಿದರು.

‘ಕಾರಿಗೆ ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ಎಂಬುದು ಗೊತ್ತಾಗಿಲ್ಲ. ತನಿಖೆ ಮುಂದುವರಿದಿದೆ’ ಎಂದೂ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು