ಗುರುವಾರ , ಡಿಸೆಂಬರ್ 3, 2020
20 °C

ಮೇಲ್ಸೇತುವೆಯಲ್ಲಿ ಹೊತ್ತಿ ಉರಿದ ಬೈಕ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಶುಕ್ರವಾರ ರಾತ್ರಿ ಚಲಿಸುತ್ತಿದ್ದ ಬೈಕೊಂದು ಬೆಂಕಿಯಿಂದ ಹೊತ್ತಿ ಉರಿದಿದ್ದು, ಸವಾರ ಕೂಡಾ ಗಾಯಗೊಂಡಿದ್ದಾರೆ.

ಹೆಬ್ಬಾಳ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದೆ. ಗಾಯಾಳು ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

‘ಮೇಲ್ಸೇತುವೆಯಲ್ಲಿ ಸಾಗುತ್ತಿದ್ದಾಗ ಬೈಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.  ಗಾಬರಿಗೊಂಡ ಸವಾರ, ರಸ್ತೆ ಪಕ್ಕದಲ್ಲಿ ಬೈಕ್ ನಿಲ್ಲಿಸಿ ಸ್ಥಳದಿಂದ ಓಡಿದ್ದ. ಆತನಿಗೂ ಸ್ವಲ್ಪ ಬೆಂಕಿ ತಾಗಿತ್ತು’ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

‘ಕೆಲ ನಿಮಿಷಗಳಲ್ಲೇ ಬೈಕ್ ಪೂರ್ತಿ ಸುಟ್ಟು ಹೋಯಿತು. ಸವಾರನನ್ನು ಸ್ಥಳೀಯರೇ ಆಸ್ಪತ್ರೆಗೆ ಕರೆದೊಯ್ದರು. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದರು. ಬೆಂಕಿ ಹೊತ್ತಿಕೊಳ್ಳಲು ಕಾರಣ ಗೊತ್ತಾಗಿಲ್ಲ’ ಎಂದು ಪ್ರತ್ಯಕ್ಷದರ್ಶಿ ಹೇಳಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು