ಗುರುವಾರ , ಅಕ್ಟೋಬರ್ 1, 2020
26 °C

ಡಿಜೆ ಹಳ್ಳಿ ಠಾಣೆಗೆ ನುಗ್ಗಿ, ವಾಹನಕ್ಕೆ ಬೆಂಕಿ; 300 ಮಂದಿ ವಿರುದ್ಧ ಎಫ್ಐಆರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಡಿ.ಜೆ.ಹಳ್ಳಿ ಠಾಣೆಗೆ ನುಗ್ಗಿ ಕಿಟಕಿ ಗಾಜುಗಳನ್ನು ಒಡೆದು ವಾಹನಗಳಿಗೆ ಬೆಂಕಿ ಹಚ್ಚಿ ಗಲಭೆ ಸೃಷ್ಟಿಸಿದ್ದ ಎಸ್‌ಡಿಪಿಐ ಮುಖಂಡರು ಸೇರಿದಂತೆ 300 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಶಿವಾಜಿನಗರದ ಅಫ್ನಾನ್, ಮುಜಾಮ್ಮಿಲ್ ಪಾಷ, ಸೈಯದ್ ಮಸೂದ್, ಅಯಾಜ್, ಅಲ್ಲಾಭಕ್ಷ ಪ್ರಮುಖ ಆರೋಪಿಗಳು.  300ಕ್ಕೂ ಹೆಚ್ಚು ಜನರ ಗುಂಪು ಕಟ್ಟಿಕೊಂಡು ಠಾಣೆಗೆ ನುಗ್ಗಿದ್ದ ಇವರು, ಪೊಲೀಸರ ಶಸ್ತ್ರಾಸ್ತ್ರ ಕಸಿದುಕೊಳ್ಳಲು ಯತ್ನಿಸಿದ್ದರು. ಠಾಣೆ ಕಟ್ಟಡದ ಗಾಜು ಒಡೆದರು. ಕಾರು ಹಾಗೂ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟಿದ್ದಾರೆ. ನಂತರವೇ ಗಲಭೆ ಸೃಷ್ಟಿಸಿದರು ಎಂದು ಎಫ್ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಠಾಣೆಗೆ ನುಗ್ಗಿದ ವೇಳೆ ಆರೋಪಿಗಳು, ಇನ್‌ಸ್ಪೆಕ್ಟರ್ ಕೇಶವಮೂರ್ತಿ, ಠಾಣೆ ಸಿಬ್ಬಂದಿ ಶ್ರೀಧರ್ ಹಾಗೂ ಹಲವರ ಮೇಲೆ ಹಲ್ಲೆ‌ ನಡೆಸಿದ್ದಾರೆ. ಹೀಗಾಗಿ, ಘಟನೆ ಬಗ್ಗೆ ಕೇಶವಮೂರ್ತಿ ಅವರೇ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು