ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹೊಸ ಕಾನೂನು: ನಸುಕಿನಲ್ಲಿ ಮೊದಲ ಪ್ರಕರಣ ದಾಖಲು

Published 1 ಜುಲೈ 2024, 18:25 IST
Last Updated 1 ಜುಲೈ 2024, 18:25 IST
ಅಕ್ಷರ ಗಾತ್ರ

ಬೆಂಗಳೂರು: ಕ್ರಿಮಿನಲ್‌ ಅಪರಾಧಕ್ಕೆ ಸಂಬಂಧಿಸಿದ ಹೊಸ ಕಾನೂನಿನ ಅಡಿ ನಗರದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಸೋಮವಾರ ಪ್ರಕರಣಗಳು ದಾಖಲಾಗಿವೆ.

ಎಚ್‌ಎಸ್‌ಆರ್‌ ಲೇಔಟ್‌ ಪೊಲೀಸ್‌ ಠಾಣೆಯಲ್ಲಿ ಸೋಮವಾರ ನಸುಕಿನ 1.30ರ ವೇಳೆಗೆ ಭಾರತ ನ್ಯಾಯ ಸಂಹಿತೆ (ಬಿಎನ್‌ಎಸ್) ಅಡಿ ಮೊದಲ ಪ್ರಕರಣ ದಾಖಲಾಗಿದೆ. ಎರಡನೇ ಪ್ರಕರಣ (ಬೆಳಿಗ್ಗೆ 9ಕ್ಕೆ) ಆಡುಗೋಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಎರಡೂ ಆತ್ಮಹತ್ಯೆ ಪ್ರಕರಣಗಳು.

ಮೂರನೇ ಪ್ರಕರಣ ವಿಧಾನಸೌಧ ಠಾಣೆಯಲ್ಲಿ ದಾಖಲಾಗಿದೆ. ಅಂಬೇಡ್ಕರ್ ವೃತ್ತದಲ್ಲಿ ಸೋಮವಾರ ನಸುಕಿನ 4.24ರ ಸುಮಾರಿಗೆ ನಡೆದು ತೆರಳುತ್ತಿದ್ದ ವ್ಯಕ್ತಿಯೊಬ್ಬರ ಕೈಯಿಂದ ಆರೋಪಿಗಳು ಮೊಬೈಲ್ ಕಸಿದು ಪರಾರಿ ಆಗಿದ್ದರು. ನಂತರ ಬೆಳಿಗ್ಗೆ 9.15 ಸುಮಾರಿಗೆ ಬಿಎನ್‌ಎಸ್‌ ಸೆಕ್ಷನ್‌ 304ರ ಅಡಿ ನಗರದಲ್ಲಿ ಮೂರನೇ ಹಾಗೂ ಕೇಂದ್ರ ವಿಭಾಗದಲ್ಲಿ ಮೊದಲ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT