ಬೆಂಗಳೂರು: ವಿರೋಧ ಪಕ್ಷಗಳ ಸದಸ್ಯರ ಧರಣಿ, ಗದ್ದಲದ ಮಧ್ಯದಲ್ಲೇ ಚರ್ಚೆಯೇ ಇಲ್ಲದೆ ಐದು ಮಸೂದೆಗಳಿಗೆ ವಿಧಾನಸಭೆ ಬುಧವಾರ ಅಂಗೀಕಾರ ನೀಡಿತು.
ಸಣ್ಣ ರೈತರು ಮತ್ತು ಆರ್ಥಿಕವಾಗಿ ದುರ್ಬಲರಾಗಿರುವವರು ದಾಖಲಿಸಿರುವ ಅಥವಾ ಪ್ರತಿವಾದಿಗಳಾಗಿರುವ ಪ್ರಕರಣಗಳನ್ನು ದಿನದ ವಿಚಾರಣಾ ಪಟ್ಟಿಯಲ್ಲಿ ಆದ್ಯತೆ ಮೇಲೆ ತೆಗೆದುಕೊಳ್ಳಲು ಅವಕಾಶ ಕಲ್ಪಿಸುವ ಸಿವಿಲ್ ಪ್ರಕ್ರಿಯಾ ಸಂಹಿತೆ (ಕರ್ನಾಟಕ ತಿದ್ದುಪಡಿ) ಮಸೂದೆ–2023 ಹಾಗೂ ಸರ್ಕಾರಿ ವ್ಯಾಜ್ಯಗಳ ನಿರ್ವಹಣೆಗೆ ಹೊಣೆಗಾರಿಕೆ ನಿಗದಿಪಡಿಸುವ ಕರ್ನಾಟಕ ಸರ್ಕಾರಿ ವ್ಯಾಜ್ಯ ನಿರ್ವಹಣೆ ಮಸೂದೆ–2023ಕ್ಕೆ ಗದ್ದಲದಲ್ಲೇ ಧ್ವನಿಮತದ ಮೂಲಕ ಒಪ್ಪಿಗೆ ನೀಡಲಾಯಿತು.
ಪತ್ತಿನ ಸಹಕಾರ ಸಂಘಗಳು, ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು, ಸಿಬ್ಬಂದಿಗೆ ಸೇವಾ ಭದ್ರತೆ ಕಲ್ಪಿಸುವ ‘ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ಮಸೂದೆ–2023’ ಅನ್ನು ಕೂಡ ಅಂಗೀಕರಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.