ಸೋಮವಾರ, ಜೂನ್ 21, 2021
21 °C

ಶುಲ್ಕ ಹೆಚ್ಚಳ ಬೇಡ: ಎಫ್‌ಕೆಸಿಸಿಐ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಕೊರೊನಾ ಸೋಂಕಿನಿಂದ ವಾಣಿಜ್ಯ ವಹಿವಾಟು ಕುಂಠಿತವಾಗಿದ್ದು, ಈ ಸಂದರ್ಭದಲ್ಲಿ ವ್ಯಾಪಾರ ಪರವಾನಗಿ ಶುಲ್ಕ ಮತ್ತು ಖಾತಾ ಶುಲ್ಕ ಏರಿಕೆ ಮಾಡುವುದರಿಂದ ವ್ಯಾಪಾರಿಗಳಿಗೆ ತೊಂದರೆಯಾಗಲಿದೆ’ ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್‌ಕೆಸಿಸಿಐ) ಅಧ್ಯಕ್ಷ ಸಿ.ಆರ್. ಜನಾರ್ದನ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

‘ಕೋವಿಡ್ ಸೋಂಕಿನಿಂದ ನಿರ್ಮಾಣವಾಗಿರುವ ಆರ್ಥಿಕ ತುರ್ತು ಪರಿಸ್ಥಿತಿಯಿಂದಾಗಿ ಸಾವಿರಾರು ಅಂಗಡಿಗಳು ಮುಚ್ಚಿವೆ.  ಇಂಥ ಸಂದರ್ಭದಲ್ಲಿ ಪರವಾನಗಿ ಶುಲ್ಕ, ಖಾತಾ ಶುಲ್ಕ ಮತ್ತು ಅಭಿವೃದ್ಧಿ ಶುಲ್ಕ ಏರಿಕೆ ಮಾಡಲಾಗುತ್ತಿದೆ. ವರಮಾನ ಸಂಗ್ರಹಕ್ಕೆ ಬಿಬಿಎಂಪಿಗೆ ಸಾಕಷ್ಟು ಅವಕಾಶಗಳಿವೆ. ಅಕ್ರಮ ಸಕ್ರಮದಲ್ಲಿ ಸಾಕಷ್ಟು ವರಮಾನ ಪಡೆಯಬಹುದಾಗಿದೆ. ಆದರೆ, ಶುಲ್ಕ ಏರಿಕೆ ಮಾಡಿ ವ್ಯಾಪಾರಿ ಮತ್ತು ಉದ್ಯಮಿಗಳಿಗೆ ಕಿರುಕುಳ ನೀಡಬಾರದು’ ಎಂದು ಮನವಿ ಮಾಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು