ಬುಧವಾರ, ಜನವರಿ 20, 2021
21 °C

ಕನಿಷ್ಠ ವೇತನ ಕಡಿಮೆ ಮಾಡಲು ಎಫ್‌ಕೆಸಿಸಿಐ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಕೋವಿಡ್ ಕಾರಣದಿಂದ ಆಗಿರುವ ಆರ್ಥಿಕ ಹಿಂಜರಿತದಿಂದ ಕೈಗಾರಿಕೆಗಳನ್ನು ಮೇಲೆತ್ತಲು ಕಾರ್ಮಿಕರ ಕನಿಷ್ಠ ವೇತನ ಪ್ರಮಾಣ ಕಡಿಮೆ ಮಾಡುವುದೂ ಸೇರಿ ಕಾರ್ಮಿಕ ಕಾನೂನುಗಳಿಗೆ ವಿನಾಯಿತಿ ನೀಡಬೇಕು’ ಎಂದು ಕರ್ನಾಟಕ  ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ(ಎಫ್‌ಕೆಸಿಸಿಐ) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

ಮುಂದಿನ ಸಾಲಿನ ಬಜೆಟ್ ಪೂರ್ವ ಮನವಿಯನ್ನು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರಿಗೆ ಸಲ್ಲಿಸಿರುವ ಎಫ್‌ಕೆಸಿಸಿಐ ಅಧ್ಯಕ್ಷ ಪೆರಿಕ್ಕಲ್‌ ಎಂ. ಸುಂದರ್‌, ‘ಕನಿಷ್ಠ ವೇತನದ ಪ್ರಮಾಣ ಕಡಿಮೆ ಮಾಡಿದರೆ ಇನ್ನಷ್ಟು ಉದ್ಯೋಗ ಸೃಷ್ಟಿಯಾಗಲಿದೆ’ ಎಂದು ಹೇಳಿದ್ದಾರೆ.

‘ಸಣ್ಣ ಮತ್ತು ಅತೀ ಸಣ್ಣ ಕೈಗಾರಿಕೆಗಳಿಗೆ ಹಣಕಾಸು ಒದಗಿಸಿರುವ ರಾಜ್ಯ ಹಣಕಾಸು ನಿಗಮಗಳನ್ನು ಆತ್ಮನಿರ್ಭರ ಪ್ಯಾಕೇಜ್ ವ್ಯಾಪ್ತಿಗೆ ತರಬೇಕು’ ಎಂದು ಕೋರಿದ್ದಾರೆ.

‘ಆನ್‌ಲೈನ್ ವಹಿವಾಟು ಉತ್ತೇಜಿಸುವ ನಿಟ್ಟಿನಲ್ಲಿ ಯುಪಿಐ, ನೆಫ್ಟ್ ರೀತಿಯ ಆನ್‌ಲೈನ್ ಪಾವತಿ ಮೇಲೆ ಶುಲ್ಕ ವಿಧಿಸುವುದನ್ನು ತಡೆಯಬೇಕು. ಸಣ್ಣ ಮತ್ತು ಅತೀ ಸಣ್ಣ ಕೈಗಾರಿಕೆಗಳು ಒಂದಕ್ಕಿಂತ ಹೆಚ್ಚು ಚಾಲ್ತಿ ಖಾತೆಗಳನ್ನು ನಿರ್ವಹಿಸಲು ಅವಕಾಶ ನೀಡಬೇಕು’ ಎಂದು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು