ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುದ್ರಾಂಕ ಶುಲ್ಕ ಪುನರ್ ಪರಿಶೀಲನೆಗೆ ಎಫ್‌ಕೆಸಿಸಿಐ ಒತ್ತಾಯ

Last Updated 1 ಆಗಸ್ಟ್ 2020, 20:55 IST
ಅಕ್ಷರ ಗಾತ್ರ

ಬೆಂಗಳೂರು: ‘ಮುದ್ರಾಂಕ ಶುಲ್ಕ ಹೆಚ್ಚಳ ಕ್ರಮವನ್ನು ರಾಜ್ಯ ಸರ್ಕಾರ ಪುನರ್ ಪರಿಶೀಲಿಸಬೇಕು’ ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ(ಎಫ್‌ಕೆಸಿಸಿಐ) ಒತ್ತಾಯಿಸಿದೆ.

‘₹35 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ಕಟ್ಟಡಗಳಿಗೆ ಶೇ 5ರಷ್ಟು ಮುದ್ರಾಂಕ ಶುಲ್ಕ ವಿಧಿಸಲಾಗಿದೆ. ಕೋವಿಡ್‌ನಿಂದ ರಿಯಲ್ ಎಸ್ಟೇಟ್ ಉದ್ಯಮ ಕಠಿಣ ಪರಿಸ್ಥಿತಿಯಲ್ಲಿದ್ದು, ಶುಲ್ಕ ಹೆಚ್ಚಳದಿಂದ ವಹಿವಾಟು ಮತ್ತಷ್ಟು ಕಡಿಮೆಯಾಗುವ ಸಾಧ್ಯತೆ ಇದೆ’ ಎಂದು ಎಫ್‌ಕೆಸಿಸಿಐ ಅಧ್ಯಕ್ಷ ಸಿ.ಆರ್. ಜನಾರ್ಧನ ಹೇಳಿದ್ದಾರೆ.

‘ರಾಜ್ಯ ಸರ್ಕಾರಕ್ಕೆ ರಾಜಸ್ವ ಒದಗಿಸುವ ಕ್ಷೇತ್ರವಾಗಿದ್ದು, ಪುನರ್ ಪರಿಶೀಲನೆ ಮಾಡಬೇಕಾಗಿದೆ. ರಿಯಲ್ ಎಸ್ಟೇಟ್ ಉದ್ಯಮಕ್ಕೆ ಚೈತನ್ಯ ನೀಡಲು ಶುಲ್ಕವನ್ನು ಶೇ 3ರಷ್ಟಕ್ಕೆ ಇಳಿಸಬೇಕು ಎಂದು ಒತ್ತಾಯಸಿ ಮುಖ್ಯಮಂತ್ರಿಗೂ ಪತ್ರ ಬರೆಯಲಾಗಿದೆ’ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT