ಭಾನುವಾರ, ಆಗಸ್ಟ್ 25, 2019
28 °C
ರಾಜ್ಯ ಸರ್ಕಾರದಿಂದ ಆದೇಶ

ಅಧಿಕಾರಿಗಳಿಂದ ಧ್ವಜಾರೋಹಣ: ಟೀಕೆ

Published:
Updated:

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಜಿಲ್ಲಾ, ತಾಲ್ಲೂಕು ಕೇಂದ್ರಗಳಲ್ಲಿ ಅಧಿಕಾರಿಗಳು ಧ್ವಜಾರೋಹಣ ನೆರವೇರಿಸುವಂತೆ ಸರ್ಕಾರ ಆದೇಶಿಸಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳು ವ್ಯಕ್ತವಾಗಿದೆ.

ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು 2 ವಾರ ಕಳೆದಿದ್ದರೂ ಸಚಿವ ಸಂಪುಟ ರಚನೆಯಾಗಿಲ್ಲ. 2008ರಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಲ್ಲಿದ್ದ ಸಮಯದಲ್ಲಿ ಅಧಿಕಾರಿಗಳು ಧ್ವಜಾರೋಹಣ ಮಾಡಿದ್ದರು. ಆದರೆ ಸರ್ಕಾರ ರಚನೆಯಾಗಿ, ಮುಖ್ಯಮಂತ್ರಿ ಅಧಿಕಾರದಲ್ಲಿ ಇದ್ದರೂ ಸಚಿವರಿಲ್ಲದೆ ಅಧಿಕಾರಿಗಳಿಂದ ಧ್ವಜಾರೋಹಣ ಮಾಡಿಸುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.

‘ಜಿಲ್ಲಾ ಉಸ್ತುವಾರಿ ಸಚಿವರ ಬದಲು ಜಿಲ್ಲಾಧಿಕಾರಿಗಳಿಂದ ಧ್ವಜಾರೋಹಣ ಮಾಡಿಸಲಾಗುತ್ತಿದೆ. ಬಿಜೆಪಿಯವರು ರಾಷ್ಟ್ರವಾದಿಗಳು ಎಂದು ಕರೆದುಕೊಳ್ಳುತ್ತಾರೆ. ಇದು ರಾಷ್ಟ್ರವಾದವೆ’ ಎಂದು ಶಾಸಕ ಪ್ರಿಯಾಂಕ ಖರ್ಗೆ ಟ್ವೀಟ್‌ ಮಾಡಿದ್ದಾರೆ.

Post Comments (+)