ಶುಕ್ರವಾರ, 12 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು | ವಾಹನಗಳಲ್ಲಿ ಕಣ್ಣು ಕುಕ್ಕುವ ದೀಪ: 266 ಪ್ರಕರಣ ದಾಖಲು

Published 3 ಜುಲೈ 2024, 15:51 IST
Last Updated 3 ಜುಲೈ 2024, 15:51 IST
ಅಕ್ಷರ ಗಾತ್ರ

ಬೆಂಗಳೂರು: ವಾಹನಗಳಿಗೆ ಕಣ್ಣುಕುಕ್ಕುವ ಎಲ್‌ಇಡಿ ದೀಪಗಳನ್ನು  ಅಳವಡಿಸಿಕೊಂಡಿದ್ದ 266 ಪ್ರಕರಣಗಳನ್ನು ಮಂಗಳವಾರ ರಾತ್ರಿ ಪೊಲೀಸರು ಪತ್ತೆ ಹಚ್ಚಿದ್ದಾರೆ.

ಪಶ್ಚಿಮ ಸಂಚಾರ ವಿಭಾಗದ ಪೊಲೀಸರು ಕೇಂದ್ರ ಮೋಟರು ವಾಹನ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿ ಅನಿತಾ ಬಿ. ಹದ್ದಣ್ಣವರ್ ತಿಳಿಸಿದ್ದಾರೆ.

ಕಣ್ಣುಕುಕ್ಕುವ ದೀಪಗಳಿಂದಾಗಿ (ಹೈ ಬೀಮ್‌ ಲೈಟ್‌) ಎದುರಿನಿಂದ ಬರುವ ವಾಹನಗಳಿಗೆ ರಸ್ತೆ ಸರಿಯಾಗಿ ಕಾಣದೇ ಅಪಘಾತಗಳು ಉಂಟಾಗುವ ಸಾಧ್ಯತೆಗಳಿವೆ. ಅವುಗಳನ್ನು ನಿಯಂತ್ರಿಸುವುದಕ್ಕಾಗಿ ಪಶ್ಚಿಮ ಸಂಚಾರ ವಿಭಾಗದ ಎಲ್ಲ ಸಂಚಾರ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ಜುಲೈ 1ರಿಂದ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT