ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುರಾತನ ಕಂಚಿನ ವಿಗ್ರಹ ಅಕ್ರಮ ಸಾಗಣೆ

Last Updated 20 ಮಾರ್ಚ್ 2022, 16:13 IST
ಅಕ್ಷರ ಗಾತ್ರ

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಪುರಾತನ ಕಂಚಿನ ವಿಗ್ರಹವನ್ನು ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

‘22 ಕೆ.ಜಿ 50 ಗ್ರಾಂ ತೂಕದ ವಿಷ್ಣುವಿನ ವಿಗ್ರಹವನ್ನು ತಮಿಳುನಾಡಿನಿಂದ ಮಲೇಷ್ಯಾ ದೇಶಕ್ಕೆ ಕೋರಿಯರ್ ಮೂಲಕ ಕಳುಹಿಸಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಕೋರಿಯರ್ ವಿಭಾಗದಲ್ಲಿ ಪರಿಶೀಲನೆ ನಡೆಸಿ, ವಿಗ್ರಹ ಪತ್ತೆ ಮಾಡಲಾಗಿದೆ’ ಎಂದು ಕಸ್ಟಮ್ಸ್ ಮೂಲಗಳು ಹೇಳಿವೆ.

‘ಭಾರತೀಯ ಪುರಾತತ್ವ ಇಲಾಖೆ ತಜ್ಞರು ವಿಗ್ರಹವನ್ನು ಪರಿಶೀಲಿಸಿ ವರದಿ ನೀಡಿದ್ದಾರೆ. ಪ್ರಾಚ್ಯ ಸಂಪತ್ತು ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ವಿಗ್ರಹ ಕಳುಹಿಸುತ್ತಿದ್ದ ತಮಿಳುನಾಡಿನ ವ್ಯಕ್ತಿಯೊಬ್ಬರನ್ನು ಬಂಧಿಸಲಾಗಿದೆ. ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ’ ಎಂದೂ ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT