ಗುರುವಾರ , ಅಕ್ಟೋಬರ್ 1, 2020
25 °C
ಭಾರತಿನಗರ-ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ

ನೆರೆ ನಿರ್ವಹಣೆ: ರಾಜ್ಯ ಸರ್ಕಾರ ವಿಫಲ– ಕೃಷ್ಣಬೈರೇಗೌಡ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಾಸಕ ಕೃಷ್ಣಬೈರೇಗೌಡ ಅವರು ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಿದರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಅಶೋಕನ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಕಾವ್ಯಾ ಮುತ್ತು, ಉಪಾಧ್ಯಕ್ಷೆ ನಳಿನ ರಾಜಕುಮಾರ್, ಸದಸ್ಯೆ ಸುಜಾತ ಶ್ರೀನಿವಾಸ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಶರಣ್ ಕುಮಾರ್, ಎಚ್.ಪಿ.ನಾರಾಯಣಸ್ವಾಮಿ, ದಯಾನಂದ್, ಹರೀಶ್ ಕುಮಾರ್ ಇದ್ದರು.

ಯಲಹಂಕ: ನೆರೆ ಪರಿಹಾರ ಹಾಗೂ ಕೋವಿಡ್-ನಿಯಂತ್ರಣ ಕಾರ್ಯವನ್ನು ಸಮರ್ಪಕವಾಗಿ ನಿಭಾಯಿಸುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಶಾಸಕ ಕೃಷ್ಣಬೈರೇಗೌಡ ಆರೋಪಿಸಿದರು.

ಹುಣಸಮಾರನಹಳ್ಳಿ ಸಮೀಪದ ಭಾರತಿನಗರದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ’ಮಡಿಕೇರಿ, ಶಿವಮೊಗ್ಗ, ಬೆಳಗಾವಿ ಮತ್ತಿತರ ಜಿಲ್ಲೆಗಳಲ್ಲಿ ಉಂಟಾಗಿರುವ ಅತಿವೃಷ್ಟಿಯಿಂದಾಗಿ ಜನರು ಆಸ್ತಿಪಾಸ್ತಿ
ಕಳೆದುಕೊಳ್ಳುವುದರ ಜೊತೆಗೆ ಬೆಳೆಹಾನಿಯಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೂ ಸರ್ಕಾರ ಇಲ್ಲಿಯವರೆಗೂ ಎಚ್ಚೆತ್ತುಕೊಂಡಿಲ್ಲ‘ ಎಂದು ದೂರಿದರು.

‘ನೆರೆ ಪರಿಹಾರಕ್ಕಾಗಿ ಸರ್ಕಾರ ₹50 ಕೋಟಿ ಬಿಡುಗಡೆ ಮಾಡಿದ್ದು, ಈ ಹಣದಿಂದ ಪರಿಸ್ಥಿತಿ ನಿಭಾಯಿಸಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಕೂಡಲೇ ಎಚ್ಚೆತ್ತುಕೊಂಡು ಸಂತ್ರಸ್ತರ ನೆರವಿಗೆ ಧಾವಿಸಬೇಕು. ಇತ್ತ ಕೊರೊನಾ ನಿಯಂತ್ರಣ ಕಾರ್ಯವನ್ನೂ ಸಮರ್ಪಕವಾಗಿ ನಿರ್ವಹಿಸದ ಪರಿಣಾಮ, ಪ್ರಕರಣಗಳು ಹೆಚ್ಚಾಗಿ ದಿನೇದಿನೇ ಹೊಸ ದಾಖಲೆಗಳು ನಿರ್ಮಾಣವಾಗುತ್ತಿವೆ.
ಆದರೂ, ಸರ್ಕಾರ ದುರಂತದಲ್ಲಿ ಹಣ ಮಾಡುವುದರಲ್ಲೇ ತೊಡಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಅಶೋಕನ್ ಮಾತನಾಡಿ, ‘ಬೆಂಗಳೂರಿನ ಕೊಳಚೆನೀರನ್ನು ಸಂಸ್ಕರಿಸಿ ಕೆರೆಗಳನ್ನು ತುಂಬಿಸುವ ಭಾಗವಾಗಿ, ಹುಣಸಮಾರನಹಳ್ಳಿ ಕೆರೆಗೆ ನೀರು ಹರಿಸಿರುವುದರಿಂದ ಸುತ್ತಮುತ್ತಲ ಪ್ರದೇಶಗಳ ಕೊಳವೆಬಾವಿಗಳಲ್ಲಿ ಅಂತರ್ಜಲಮಟ್ಟ ಹೆಚ್ಚಾಗಲಿದೆ. ಇದರಿಂದ ಶೀಘ್ರದಲ್ಲೇ ಈ ಭಾಗದ ಜನರ ನೀರಿನ ಬವಣೆ ನೀಗಲಿದೆ‘ ಎಂದು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು