ಭಾನುವಾರ, ಆಗಸ್ಟ್ 18, 2019
26 °C

ರಾಜ್ಯಕ್ಕೆ ಶೀಘ್ರ ಕೇಂದ್ರದ ತಂಡ

Published:
Updated:

ನವದೆಹಲಿ: ಪ್ರವಾಹದಿಂದ ತತ್ತರಿಸಿರುವ ರಾಜ್ಯದ ಸ್ಥಿತಿಗತಿ ಅರಿಯುವ ನಿಟ್ಟಿನಲ್ಲಿ ಶೀಘ್ರವೇ ಅಧ್ಯಯನ ತಂಡ ಕಳುಹಿಸುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಂಗಳವಾರ ಇಲ್ಲಿ ನಡೆದ ಕೇಂದ್ರದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿ, ರಾಜ್ಯಕ್ಕೆ ಅಗತ್ಯ ನೆರವು ಕೋರಲಾಗಿದೆ
ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಸುದ್ದಿಗಾರರಿಗೆ ತಿಳಿಸಿದರು.

ರಾಜ್ಯದಲ್ಲಿ ತಲೆದೋರಿರುವ ಪ್ರವಾಹ ಸ್ಥಿತಿಯ ಕುರಿತು ಗೃಹ ಸಚಿವ ಅಮಿತ್‌ ಶಾ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದಲೂ ಮಾಹಿತಿ ಪಡೆದ ಪ್ರಧಾನಿ, ಶೀಘ್ರದಲ್ಲೇ ಕೇಂದ್ರದ ಅಧ್ಯಯನ ತಂಡ ಕಳುಹಿಸಿ, ವರದಿ ಪಡೆದು ನಷ್ಟ ಪರಿಹಾರ ಮಂಜೂರು ಮಾಡಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು ಎಂದು ಅವರು ಹೇಳಿದರು.

Post Comments (+)