ಭಾನುವಾರ, ನವೆಂಬರ್ 29, 2020
20 °C

ಲಾಲ್‍ಬಾಗ್: ಫಲಪುಷ್ಪ ಪ್ರದರ್ಶನ ರದ್ದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಲಾಲ್‍ಬಾಗ್ ಉದ್ಯಾನ ದಲ್ಲಿ ಪ್ರತಿವರ್ಷದಂತೆ ಈ ಜನವರಿಯಲ್ಲಿ ನಡೆಯಬೇಕಿದ್ದ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನವನ್ನು ಕೊರೊನಾ ಕಾರಣದಿಂದ ರದ್ದುಪಡಿಸಲಾಗಿದೆ.

ಕೊರೊನಾ ಸೋಂಕಿನ ಕಾರಣಕ್ಕೆ ಆಗಸ್ಟ್‌ನಲ್ಲಿ ನಡೆಯಬೇಕಿದ್ದ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನವೂ ರದ್ದಾಗಿತ್ತು.

ಪ್ರದರ್ಶನಕ್ಕೆ ಹೆಚ್ಚು ಜನರು ಸೇರುವುದರಿಂದ ಕೊರೊನಾ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಈ ಪ್ರದರ್ಶನವನ್ನೂ ರದ್ದುಗೊಳಿಸಲು ತೋಟಗಾರಿಕೆ ಇಲಾಖೆ ಹಾಗೂ ಮೈಸೂರು ಉದ್ಯಾನ ಕಲಾ ಸಂಘ ತೀರ್ಮಾನಿಸಿವೆ.

‘ಜನವರಿಯಲ್ಲಿ ಆಯೋಜಿಸುವ ಪ್ರದರ್ಶನಕ್ಕೆ ಈಗಿನಿಂದಲೇ ತಯಾರಿಗಳು ನಡೆಯಬೇಕಿತ್ತು. ಆದರೆ, ಕೊರೊನಾ ಕಾರಣದಿಂದ ಯಾವುದೇ ತಯಾರಿ ನಡೆದಿಲ್ಲ’ ಎಂದು ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಎಂ.ಜಗದೀಶ್ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು