ಸೋಮವಾರ, ಜನವರಿ 18, 2021
15 °C

ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ ರದ್ದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನ-ಸಾಂದರ್ಭಿಕ ಚಿತ್ರ

ಬೆಂಗಳೂರು: ಲಾಲ್‌ಬಾಗ್‌ ಉದ್ಯಾನದಲ್ಲಿ ನಡೆಯಬೇಕಿದ್ದ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನವನ್ನು ಕೊರೊನಾ ಕಾರಣದಿಂದ ರದ್ದುಗೊಳಿಸಲು ಮೈಸೂರು ಉದ್ಯಾನಕಲಾ ಸಂಘ ಮತ್ತು ತೋಟಗಾರಿಕೆ ಇಲಾಖೆ ನಿರ್ಧರಿಸಿವೆ.

ಪ್ರತಿವರ್ಷ ಜನವರಿ ಮತ್ತು ಆಗಸ್ಟ್‌ನಲ್ಲಿ ಫಲಪುಷ್ಪ ಪ್ರದರ್ಶನ ನಡೆಯುತ್ತಿತ್ತು. ಕೊರೊನಾ ಕಾರಣದಿಂದಲೇ ಕಳೆದ ಆಗಸ್ಟ್‌ನಲ್ಲೂ ಪ್ರದರ್ಶನ ರದ್ದುಗೊಂಡಿತ್ತು. ಜನವರಿ ವೇಳೆಗೆ ಪರಿಸ್ಥಿತಿ ನಿಯಂತ್ರಣಕ್ಕೆ ಬರುವ ನಿರೀಕ್ಷೆಯಿಂದ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ ಆಯೋಜಿಸಲು ಉದ್ದೇಶಿಸಲಾಗಿತ್ತು.

‘ಕೊರೊನಾ ವೈರಸ್‌ ಹರಡುವ ಸಾಧ್ಯತೆಗಳು ಇರುವುದರಿಂದ ಪ್ರದರ್ಶನ ರದ್ದು ಪಡಿಸುವುದು ಸೂಕ್ತ ಎಂದು ಇತ್ತೀಚೆಗೆ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ. ಲಾಲ್‌ಬಾಗ್‌ನಲ್ಲಿ ಈವರೆಗೆ ಮೂರು ಬಾರಿ ಫಲಪುಷ್ಪ ಪ್ರದರ್ಶನ ರದ್ದಾಗಿದೆ. ಆಗಸ್ಟ್‌ನಲ್ಲಿ ಪ್ರದರ್ಶನ ನಡೆಯಲಿದೆ’ ಎಂದು ಮೈಸೂರು ಉದ್ಯಾನ ಕಲಾ ಸಂಘದ ಪದಾಧಿಕಾರಿಗಳು ಮಾಹಿತಿ ನೀಡಿದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು