ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುನೀತ್ ಹೆಸರಿನಲ್ಲಿ ಪುಷ್ಪ ಪ್ರದರ್ಶನ

Last Updated 12 ಜುಲೈ 2022, 19:24 IST
ಅಕ್ಷರ ಗಾತ್ರ

ಬೆಂಗಳೂರು: ಲಾಲ್‌ಬಾಗ್‌ನಲ್ಲಿ ಆಗಸ್ಟ್‌ 5ರಿಂದ 15ರ ವೆರೆಗೆ ಚಿತ್ರನಟ ಪುನೀತ್‌ ರಾಜ್‌ಕುಮಾರ್‌ ಹೆಸರಿನಲ್ಲಿ ಪುಷ್ಪ ಪ್ರದರ್ಶನ ನಡೆಸಲಾಗುವುದು ಎಂದು ತೋಟಗಾರಿಕಾ ಸಚಿವ ಮುನಿರತ್ನ ತಿಳಿಸಿದರು.

ಸುದ್ದಿಗಾರರ ಜತೆ ಮಂಗಳವಾರ ಮಾತನಾಡಿದ ಅವರು, ‘ಕಳೆದ ವರ್ಷ ಕೋವಿಡ್‌ ಕಾರಣದಿಂದ ಪುಷ್ಪ ಪ್ರದರ್ಶನ ನಡೆಸಿರಲಿಲ್ಲ. ಈ ವರ್ಷ ಕೋವಿಡ್‌ ಸುರಕ್ಷತಾ ಮಾರ್ಗಸೂಚಿಯನ್ನು ಪಾಲಿಸಿಕೊಂಡು ಪ್ರದರ್ಶನ ನಡೆಸ
ಲಾಗುವುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆ.5ರಂದು ಚಾಲನೆ ನೀಡಲಿದ್ದಾರೆ’ ಎಂದರು.

ಪ್ರದರ್ಶನಕ್ಕಾಗಿ ವಿದೇಶಗಳಿಂದ ಹೂವುಗಳನ್ನು ತರಿಸಲಾಗುವುದು. ಡಾ. ರಾಜ್‌ಕುಮಾರ್‌ ಮತ್ತು ಪುನೀತ್‌ ರಾಜ್‌ಕುಮಾರ್‌ ಅವರ ಪ್ರತಿಮೆಗಳನ್ನು ಪುಷ್ಪಗಳಿಂದ ಅಲಂಕರಿಸಲಾಗುವುದು.
ಪ್ರದರ್ಶನ ವೀಕ್ಷಣೆಗೆ ಬರುವವರಿಗೆ ವಿಧಿಸುವ ಪ್ರವೇಶ ಶುಲ್ಕ ಹೆಚ್ಚಿಸುವ ಕುರಿತು ಚರ್ಚಿಸಿಲ್ಲ ಎಂದು ಹೇಳಿದರು.

‘ಅತಿವೃಷ್ಟಿಯಿಂದ ಆಗಿರುವ ತೋಟಗಾರಿಕಾ ಬೆಳೆ ಹಾನಿ ಕುರಿತು ಅಧಿಕಾರಿಗಳವರದಿ ಬಳಿಕ ಪರಿಹಾರದ ಕುರಿತು ತೀರ್ಮಾನಿಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT