ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಷೇತ್ರ ವ್ಯಾಪ್ತಿಯ 10 ಸಾವಿರ ಕುಟುಂಬಗಳಿಗೆ ಆಹಾರ ಕಿಟ್ ವಿತರಿಸಿದ ಸೋಮಣ್ಣ

Last Updated 30 ಮಾರ್ಚ್ 2020, 11:27 IST
ಅಕ್ಷರ ಗಾತ್ರ

ಬೆಂಗಳೂರು: ಗೋವಿಂದರಾಜ ನಗರ ಹಾಗೂ ವಿಜಯನಗರ ವಾರ್ಡ್‍ನ 10 ಸಾವಿರ ಬಡ ಕುಟುಂಬಗಳಿಗೆ ವಸತಿ ಸಚಿವ ವಿ.ಸೋಮಣ್ಣ ಅವರ ನೇತೃತ್ವದಲ್ಲಿ ಸೋಮವಾರ ಆಹಾರ ಕಿಟ್ ವಿತರಿಸಲಾಯಿತು.


ಬಾಲಗಂಗಾಧರನಾಥ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಹಿಳೆಯರು ಹಾಗೂ ಕೂಲಿ ಕಾರ್ಮಿಕರಿಗೆ ಅಕ್ಕಿ, ಬೇಳೆ, ಅಡುಗೆ ಎಣ್ಣೆ, ಉಪ್ಪು, ಸಕ್ಕರೆ, ಮೈದಾ ಇನ್ನಿತರ ದಿನಸಿ ಪದಾರ್ಥಗಳನ್ನೊಳಗೊಂಡ ಆಹಾರ ಕಿಟ್ ವಿತರಣೆ ನೀಡಲಾಯಿತು. ಆರೋಗ್ಯ ತಪಾಸಣೆ ಕಿಟ್, ಸೋಂಕು ನಿವಾರಕ ಔಷಧಿ ಸಿಂಪಡಣೆ ಯಂತ್ರಗಳು ಹಾಗೂ ಅಗ್ನಿಶಾಮಕ ವಾಹನ ಮೂಲಕ ರಾಸಾಯನಿಕ ಸಿಂಪಡನೆ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.

ಬಳಿಕ ಸೋಮಣ್ಣ ಮಾತನಾಡಿ, ’ಗೋವಿಂದರಾಜನಗರ, ವಿಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿ.ಪಿ.ಎಲ್.ಕಾರ್ಡ್ ಇಲ್ಲದ ಬಡವರು, ಕೂಲಿ ಕಾರ್ಮಿಕರು, ಆಟೊ ಚಾಲಕರಿಗೆ ಆಹಾರ ಕಿಟ್ ವಿತರಿಸಲಾಗುತ್ತಿದೆ. ಹಸಿವನಿಂದ ಯಾರೂ ಬಳಲಬಾರದು. ಬಡವರ ಅನುಕೂಲಕ್ಕಾಗಿ ಸಹಾಯವಾಣಿ ಸೇವೆ ಒದಗಿಸಲಾಗಿದೆ. ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧ ಶೀಘ್ರದಲ್ಲೇ ನಮಗೆ ಜಯ ಸಿಗಲಿದೆ' ಎಂದರು.

ಪಾಲಿಕೆ ಸದಸ್ಯ ಕೆ.ಉಮೇಶ್ ಶೆಟ್ಟಿ, ’ಬಡವರು ಸುಲಭವಾಗಿ ಆಹಾರ ತಯಾರಿಸಿಕೊಳ್ಳಲು ಅನುಕೂಲವಾಗುವಂತೆ ಆಹಾರ ಕಿಟ್‍ಗಳನ್ನು ವಿತರಿಸಿದ್ದೇವೆ. ಲಾಕ್‍ಡೌನ್ ಮುಗಿಯುವವರೆಗೂ ಆಹಾರ ವಿತರಣೆ ಮಾಡಲಿದ್ದೇವೆ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT