ಸೋಮವಾರ, ಜೂನ್ 21, 2021
30 °C

ತೊಂದರೆಗೆ ಸಿಲುಕಿದ ಕಾರ್ಮಿಕರಿಗೆ ದಿನಸಿ ಪದಾರ್ಥ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್‌–19 ಲಾಕ್‌ಡೌನ್‌ ಹಿನ್ನೆಲೆಯಲ್ಲಿ ತೊಂದರೆಗೆ ಸಿಲುಕಿರುವ ಪಡಿತರ ಚೀಟಿ ಇಲ್ಲದ ಉತ್ತರಕರ್ನಾಟಕ ಮತ್ತು ಉತ್ತರ ಭಾರತದ ಕಾರ್ಮಿಕರಿಗೆ ದಿನಸಿ ಸಾಮಾನುಗಳನ್ನು ವಿತರಿಸಲು ಸಂಸದೆ ಶೋಭಾ ಕರಂದ್ಲಾಜೆ ಮುಂದಾಗಿದ್ದಾರೆ.

ಪ್ರತಿ ದಿನ 10 ಸಾವಿರ ಕುಟುಂಬಗಳಿಗೆ 20 ದಿನಗಳವರೆಗೆ 10 ಕೆ.ಜಿ ಅಕ್ಕಿ, 2 ಕೆ.ಜಿ ಬೇಳೆ, ಅರ್ಧ ಕೆ.ಜಿ ಎಣ್ಣೆ, ಅರ್ಧ ಕೆ.ಜಿ ಉಪ್ಪು, 100 ಗ್ರಾಂ ಅರಿಶಿಣ ನೀಡುವುದಾಗಿ ತಿಳಿಸಿದ್ದಾರೆ.

ಸಂಸದರ ಮಲ್ಲೇಶ್ವರ ಕಚೇರಿಯಲ್ಲಿ ಈ ಅವಶ್ಯ ವಸ್ತುಗಳನ್ನು ಸಂಗ್ರಹಿಸಲಾಗಿದ್ದು, ವಿತರಣೆಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮಂಗಳವಾರ ಚಾಲನೆ ನೀಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು