ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗಣೇಶ ಹಬ್ಬದ ಪ್ರಸಾದ: ತಯಾರಕರ ಪರವಾನಗಿ ಪರಿಶೀಲನೆ

Published : 4 ಸೆಪ್ಟೆಂಬರ್ 2024, 15:13 IST
Last Updated : 4 ಸೆಪ್ಟೆಂಬರ್ 2024, 15:13 IST
ಫಾಲೋ ಮಾಡಿ
Comments

ಬೆಂಗಳೂರು: ಗಣೇಶ ಹಬ್ಬದ ಪ್ರಸಾದ ತಯಾರಿಸುವ ವ್ಯಕ್ತಿ ಅಥವಾ ಸಂಸ್ಥೆಯು ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರದ (ಎಫ್‌ಎಸ್‌ಎಸ್‌ಎಐ) ನೋಂದಣಿ, ಪರವಾನಗಿ ಹೊಂದಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಅಂಕಿತಾಧಿಕಾರಿಗಳಿಗೆ ಸೂಚಿಸಿದೆ.

ಈ ಬಗ್ಗೆ ಇಲಾಖೆ ಆಯುಕ್ತರು ಪತ್ರ ಬರೆದಿದ್ದಾರೆ. ಹಬ್ಬದ ಸಂದರ್ಭದಲ್ಲಿ ಗಣೇಶ ವಿಗ್ರಹ ಪ್ರತಿಷ್ಠಾಪನೆ ಮಾಡಿದ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ‍ಪಾಲ್ಗೊಳ್ಳುತ್ತಾರೆ. ಈ ವೇಳೆ ವಿತರಿಸಲಾಗುವ ಆಹಾರ ಪದಾರ್ಥಗಳನ್ನು ಪ್ರಸಾದ ರೂಪದಲ್ಲಿ ಸೇವಿಸುತ್ತಾರೆ. ಆದ್ದರಿಂದ ಪ್ರಸಾದದ ನೈರ್ಮಲ್ಯ, ಗುಣಮಟ್ಟ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

ಗಣೇಶ ವಿಗ್ರಹಗಳ ಪ್ರತಿಷ್ಠಾಪನೆಗಾಗಿ ಸ್ಥಳೀಯ ಸಂಸ್ಥೆಗಳಿಂದ ಅನುಮತಿ ನೀಡುವ ಸಂದರ್ಭದಲ್ಲಿ, ಎಫ್‌ಎಸ್‌ಎಸ್‌ಎಐನಿಂದ ಪರವಾನಗಿ ಪಡೆದ ವ್ಯಕ್ತಿ ಅಥವಾ ಸಂಸ್ಥೆಯಿಂದ ಪ್ರಸಾದ ತಯಾರಿಸಲಾಗುತ್ತಿದೆಯೇ ಎನ್ನುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಪತ್ರದಲ್ಲಿ ನಿರ್ದೇಶನ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT