ಬೆಂಗಳೂರು: ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ದಗೊಳಿಸುವಿಕೆ (ಪಿಎಂಎಫ್ಎಂಇ) ಯೋಜನೆಯಡಿ ಶೇ 35ರಷ್ಟು ಸಹಾಯಧನ ಅಂದರೆ ₹60.90 ಕೋಟಿ ಬಿಡುಗಡೆ ಮಾಡಲಾಗಿದೆ.

ಸೆ.28ರವರೆಗೆ ನವದೆಹಲಿಯಲ್ಲಿ ನಡೆಯಲಿರುವ ವರ್ಲ್ಡ್ ಫುಡ್ ಇಂಡಿಯಾ 2025 ವ್ಯಾಪಾರ ಮೇಳದ ಭಾಗವಾಗಿ ಸಹಾಯಧನವನ್ನು 1,642 ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿದೆ.

ಇದರಲ್ಲಿ ಕೇಂದ್ರದ ಪಾಲು ₹ 36.54 ಕೋಟಿ ಹಾಗೂ ರಾಜ್ಯದ ಪಾಲು ₹ 24.36 ಕೋಟಿ ಆಗಿರಲಿದೆ. ಹಾಗೆಯೇ ರಾಜ್ಯ ಸರ್ಕಾರದಿಂದ ₹ 27.17 ಕೋಟಿ ಹೆಚ್ಚುವರಿ ಟಾಪ್-ಅಪ್ ಅನುದಾನವನ್ನು ಫಲಾನುಭವಿಗಳಿಗೆ ಶೀಘ್ರ ಬಿಡುಗಡೆ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತ(ಕೆಪೆಕ್) ಅಧ್ಯಕ್ಷ ಬಿ.ಎಚ್. ಹರೀಶ್ ತಿಳಿಸಿದ್ದಾರೆ.

ಈ ಅನುದಾನ ಆಹಾರ ಸಂಸ್ಕರಣಾ ಕ್ಷೇತ್ರ ಉತ್ತೇಜಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಕೈಗೊಂಡಿರುವ ಮಹತ್ವದ ಹೆಜ್ಜೆಯಾಗಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.