ಭಾನುವಾರ, ಸೆಪ್ಟೆಂಬರ್ 26, 2021
21 °C

ಆಹಾರ ಪೂರೈಕೆ ಆ್ಯಪ್‌ನಲ್ಲೇ ಡ್ರಗ್ಸ್ ವ್ಯವಹಾರ: ಆರೋಪಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಆಹಾರ ಪೂರೈಕೆ ಆ್ಯಪ್‌ಗಳ ಮೂಲಕವೇ ಡ್ರಗ್ಸ್ ದಂಧೆ ನಡೆಸುತ್ತಿದ್ದ ಆರೋಪದಡಿ ಪೆಡ್ಲರೊಬ್ಬನನ್ನು ಗೋವಿಂದಪುರ ಪೊಲೀಸರು ಬಂಧಿಸಿದ್ದಾರೆ.

‘ಬಿಟಿಎಂ ಬಡಾವಣೆಯಲ್ಲಿ ನೆಲೆಸಿದ್ದ ಪೆಡ್ಲರ್, ನೈಜೀರಿಯಾ ಪ್ರಜೆಗಳ ಜೊತೆ ಒಡನಾಡವಿಟ್ಟುಕೊಂಡು ಡ್ರಗ್ಸ್ ಖರೀದಿಸುತ್ತಿದ್ದ. ಸ್ವಿಗ್ಗಿ, ಡನ್ಜೊ ಹಾಗೂ ಇತರೆ ಆ್ಯಪ್‌ಗಳ ಮೂಲಕ ಗ್ರಾಹಕರನ್ನು ಸಂಪರ್ಕಿಸಿ ಡ್ರಗ್ಸ್ ಮಾರುತ್ತಿದ್ದ. ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿರುವ ಮಹಿಳಾ ಉದ್ಯಮಿ ಸೋನಿಯಾ ಅಗರವಾಲ್ ಹಾಗೂ ಆಕೆಯ ಸ್ನೇಹಿತ ಡಾ. ದಿಲೀಪ್ ಈ ಸಂಗತಿ ಬಾಯ್ಬಿಟ್ಟಿದ್ದರು. ಅದನ್ನು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

‘ಕೆಲ ಆಹಾರಗಳಿಗೆ ಅನ್ಯ ಹೆಸರು ಇರಿಸಲಾಗಿತ್ತು. ಆಹಾರ ಪೊಟ್ಟಣದಲ್ಲಿ ಡ್ರಗ್ಸ್ ಬಚ್ಚಿಟ್ಟು ಗ್ರಾಹಕರಿಗೆ ಕಳುಹಿಸಲಾಗುತ್ತಿತ್ತು. ಈ ವ್ಯವಸ್ಥಿತ ಜಾಲದ ಬಗ್ಗೆ ತನಿಖೆ ಮುಂದುವರಿಸಲಾಗಿದೆ’ ಎಂದೂ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು