ಶನಿವಾರ, ನವೆಂಬರ್ 26, 2022
23 °C
ರಾಜ್ಯ ಸರ್ಕಾರದ ‘ಪೌರ ಸನ್ಮಾನ’ ಸ್ವೀಕರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನಾನು ಏನೇ ಆಗಿದ್ದರೂ ನಿಮ್ಮ ಸೇವೆಗಾಗಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ನಾನು ಏನೇ ಆಗಿದ್ದರೂ ನಿಮ್ಮ ಸೇವೆಗಾಗಿ’ ಎಂದು ರಾಜ್ಯ ಸರ್ಕಾರದ ‘ಪೌರ ಸನ್ಮಾನ’ ಸ್ವೀಕರಿಸಿದ ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು.

ವಿಧಾನಸೌಧದ ಬ್ಯಾಂಕ್ವೆಟ್‌ ಸಭಾಂಗಣದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ದ್ರೌಪದಿ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರಚಂದ್ ಗೆಹಲೋತ್‌ ಸತ್ಕರಿಸಿದರು.

ನಾಗರಿಕರ ಪರವಾಗಿ ವಿವಿಧ ಕ್ಷೇತ್ರಗಳ ಸಾಧಕರಾದ ಇಸ್ಕಾನ್ ಮುಖ್ಯಸ್ಥ ಮಧು ಪಂಡಿತದಾಸ, ಸಾಹಿತಿ ಚಂದ್ರಶೇಖರ ಕಂಬಾರ, ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ, ಉದ್ಯಮಿಗಳಾದ ಕಿರಣ್ ಮಜುಂದಾರ್ ಷಾ, ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾದ ಮಂಜಮ್ಮ ಜೋಗತಿ ಗೌರವಿಸಿದರು.

‘ತಾಯಿ ಭುವನೇಶ್ವರಿಗೆ ಹಾಗೂ ಸಮಸ್ತ ಕನ್ನಡಿಗರಿಗೆ ಹೃದಯಪೂರ್ವಕ ನಮಸ್ಕಾರಗಳು’ ಎಂದು ಕನ್ನಡದಲ್ಲಿ ಹೇಳುತ್ತಲೇ ಭಾಷಣ ಆರಂಭಿಸಿದ ರಾಷ್ಟ್ರಪತಿ, ಕರ್ನಾಟಕದ ಪರಂಪರೆ, ವಿವಿಧ ಕ್ಷೇತ್ರಗಳಲ್ಲಿ ನೀಡಿದ ಕೊಡುಗೆಯನ್ನು ಸ್ಮರಿಸಿದರು. ಕನ್ನಡಿಗರ ಪ್ರೀತಿ, ಹೃದಯ ವೈಶಾಲ್ಯ, ತೋರಿದ ಅಭಿಮಾನ, ಸತ್ಕಾರ, ಕನ್ನಡಿಗರ ಮೃದು ಸ್ವಭಾವ, ಶಾಂತಿಪ್ರಿಯತೆ, ಉದಾರ
ಮನೋಭಾವನೆಯನ್ನು ಪ್ರಶಂಸಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ಬುಡಕಟ್ಟು ಜನಾಂಗದ ಮಹಿಳೆಯೊಬ್ಬರು ರಾಷ್ಟ್ರದ ಉನ್ನತ ಹುದ್ದೆ
ಗೇರಿರುವುದು ಪ್ರಜಾಪ್ರಭುತ್ವದ ವೈಶಿಷ್ಟ್ಯ’ ಎಂದರು. ‘ದ್ರೌಪದಿ ಮುರ್ಮು ಅವರು ಪ್ರಜಾಪ್ರಭುತ್ವದ ಘನತೆ ಎತ್ತಿಹಿಡಿದಿದ್ದಾರೆ. ಎಲ್ಲ ವಿಚಾರಗಳನ್ನು ತಿಳಿದುಕೊಂಡಿದ್ದರೂ ಪ್ರದರ್ಶಿಸದೇ ಇರುವ ಅವರ ಮುಗ್ಧತೆ, ಆತ್ಮಸಾಕ್ಷಿಯಾಗಿ ನಡೆದುಕೊಳ್ಳುವ ಗುಣ ಮಾದರಿ’ ಎಂದರು.

‘ಹಿಂದುಳಿದ ಮತ್ತು ದುರ್ಬಲ ವರ್ಗಗಳ ಜೀವನವನ್ನು ಸುಧಾರಿಸುವುದು, ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಬಲಪಡಿ
ಸುವ ಕೆಲಸದಲ್ಲಿ ತೊಡಗಿರುವ ದ್ರೌಪದಿ ಮುರ್ಮು ಅವರು ಸರಳತೆ, ವಿನಮ್ರತೆಯ ಪ್ರತೀಕವಾಗಿದ್ದಾರೆ’ ಎಂದು ರಾಜ್ಯಪಾಲ ಥಾವರಚಂದ್ ಗೆಹಲೋತ್‌ ಹೇಳಿದರು.

ವಿಧಾನ ಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನಪರಿಷತ್ ಸಭಾಪತಿ ರಘುನಾಥ ರಾವ್ ಮಲ್ಕಾಪುರೆ, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಎ. ನಾರಾಯಣಸ್ವಾಮಿ, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು