ಗುರುವಾರ , ಜುಲೈ 29, 2021
27 °C

ಮಾದಕ ವಸ್ತು ಮಾರಾಟ: ವಿದೇಶಿ ಪ್ರಜೆ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ನಗರದಲ್ಲಿ ಮಾದಕ ವಸ್ತು ಕೊಕೇನ್‌ ಮಾರುತ್ತಿದ್ದ ಆರೋಪದಡಿ ವಿದೇಶಿ ಪ್ರಜೆಯನ್ನು ಸಿಸಿಬಿಯ ಮಾದಕವಸ್ತು ನಿಗ್ರಹ ದಳದ ‍ಅಧಿಕಾರಿಗಳು ಬಂಧಿಸಿದ್ದಾರೆ.

ನಗರದಲ್ಲಿ ವಾಸವಿದ್ದ ನೈಜೀರಿ ಯಾದ ಕೆಲ್ವಿನ್ ಇಡಿಕಾ ಒಕೊರೊ (28) ಬಂಧಿತ ಡ್ರಗ್ ಪೆಡ್ಲರ್. ಹೊರಮಾವು ಸಿಗ್ನಲ್ ಬಳಿಯ ಕಲ್ಲುಮಂಟಪ ಸರ್ವೀಸ್ ರಸ್ತೆಯ ಬಳಿ ಆರೋಪಿ ಕೊಕೇನ್ ಮಾರಾಟ ಮಾಡುತ್ತಿದ್ದ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ದಾಳಿ ನಡೆಸಿದ ವೇಳೆ ಆರೋಪಿ ಸಿಕ್ಕಿಬಿದ್ದಿದ್ದಾನೆ.

‘ಆರೋಪಿ ಬಳಿಯಿದ್ದ ₹4 ಲಕ್ಷ ಮೌಲ್ಯದ 54 ಗ್ರಾಂ. ಕೊಕೇನ್, ದ್ವಿಚಕ್ರ ವಾಹನ, ಮೂರು ಮೊಬೈಲ್ ಹಾಗೂ ತೂಕದ ಯಂತ್ರ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ತಿಳಿಸಿದರು.

‘ಆರೋಪಿ ವಿದ್ಯಾರ್ಥಿ ವೀಸಾ ಪಡೆದು ಭಾರತಕ್ಕೆ ಬಂದಿದ್ದ. ಇಲ್ಲಿ ಮಾದಕ ವಸ್ತುಗಳ ಮಾರಾಟ ಜಾಲದಲ್ಲಿ ಸಕ್ರಿಯನಾಗಿದ್ದ. ನೈಜೀರಿಯಾದ ವ್ಯಕ್ತಿಯೊಬ್ಬನಿಂದ ಮುಂಬೈನಲ್ಲಿ ಕೊಕೇನ್‌ ಖರೀದಿಸಿ, ಬಳಿಕ ಬೆಂಗಳೂರಿನಲ್ಲಿ ಮಾರಾಟ ಮಾಡಿ ಅಕ್ರಮವಾಗಿ ಹಣ ಸಂಪಾದಿಸುತ್ತಿದ್ದ’ ಎಂದು ಸಿಸಿಬಿ ಜಂಟಿ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ ಮಾಹಿತಿ ನೀಡಿದರು.

‘ಆರೋಪಿ ವಿರುದ್ಧ ಸಂಪಿಗೆಹಳ್ಳಿ ಠಾಣೆಯಲ್ಲಿ ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆ (ಎನ್‌ಡಿಪಿಎಸ್) ಹಾಗೂ ವಿದೇಶಿಯರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ’ ಎಂದೂ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು