ಬಾಂಗ್ಲಾದವರ ಹಸ್ತಾಂತರ
ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಜಿಲ್ಲೆಯಲ್ಲಿ ನೆಲಸಿರುವ ಬಾಂಗ್ಲಾದೇಶದ ಅಕ್ರಮ ವಲಸಿಗರನ್ನು ಪತ್ತೆಹಚ್ಚುವ ಪ್ರಕ್ರಿಯೆಯನ್ನು ಈ ವರ್ಷ ಚುರುಕುಗೊಳಿಸಲಾಗಿದೆ. ಆಯಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆಯನ್ನೂ ನೀಡಲಾಗಿದೆ. ಬಾಂಗ್ಲಾದೇಶದ ಅಕ್ರಮ ವಲಸಿಗರು ರಾಜ್ಯದಲ್ಲಿ ಪತ್ತೆಯಾದರೆ ಅವರನ್ನು ವಿಮಾನದಲ್ಲಿ ಸಮೀಪದ ನಿಲ್ದಾಣಕ್ಕೆ ಕರೆದೊಯ್ದು ಗಡಿಭದ್ರತಾ ಪಡೆಯ ಸಿಬ್ಬಂದಿಗೆ ಹಸ್ತಾಂತರ ಮಾಡಲಾಗುತ್ತಿದೆ. ಅಲ್ಲಿಂದ ಬಾಂಗ್ಲಾದೇಶಕ್ಕೆ ಕಳುಹಿಸಲಾಗುತ್ತಿದೆ’ ಎಂದು ಮೂಲಗಳು ಹೇಳಿವೆ.