ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಲಯದ ಜಾಗತಿಕ ಭಾಷೆಗಳ ಅಧ್ಯಯನ ಕೇಂದ್ರವು ಫ್ರೆಂಚ್, ಜರ್ಮನ್, ಸ್ಪ್ಯಾನಿಷ್, ಜಪಾನೀಸ್, ಕೊರಿಯನ್, ಚೈನೀನ್, ಇಟಾಲಿಯನ್, ಪೋರ್ಚುಗೀಸ್ನಂತಹ ವಿದೇಶಿ ಭಾಷೆಗಳ ಕಲಿಕೆಗೆ ಅವಕಾಶ ಕಲ್ಪಿಸುತ್ತಿದ್ದು, ವಾರಾಂತ್ಯದಲ್ಲಿ ತರಗತಿಗಳನ್ನು ಆರಂಭಿಸುತ್ತಿದೆ.
ಪ್ರತಿ ಭಾಷಾ ಕೋರ್ಸ್ಗೆ ಒಂದು ವರ್ಷದ ಸರ್ಟಿಫಿಕೇಟ್ ಕೋರ್ಸ್, ಒಂದು ವರ್ಷದ ಯುಜಿ ಡಿಪ್ಲೊಮಾ ಕೋರ್ಸ್ ಹಾಗೂ ಒಂದು ವರ್ಷದ ಪಿಜಿ ಡಿಪ್ಲೊಮಾ ಕೋರ್ಸ್ಗಳಿವೆ. ಅಧ್ಯಯನದ ಆಧಾರದಲ್ಲಿ ಸರ್ಟಿಫಿಕೇಟ್ ನೀಡಲಾಗುತ್ತದೆ.
ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಶಿಕ್ಷಣದಲ್ಲಿ ಪಾಸಾಗಿರುವವರು ಈ ಕೋರ್ಸ್ಗಳಿಗೆ ಅರ್ಜಿ ಸಲ್ಲಿಸಬಹುದು. ಉನ್ನತ ಶಿಕ್ಷಣ ಇಲಾಖೆಯ ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ನಿರ್ವಹಣಾ ವ್ಯವಸ್ಥೆ (ಯುಯುಸಿಎಂಎಸ್) ಅಡಿ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಬಹುದು.
ಹೆಚ್ಚಿನ ಮಾಹಿತಿಗೆ 080-29572019/9353251761ಗೆ ಕರೆ ಮಾಡಬಹುದು ಅಥವಾ ವಿವಿಯ ಜಾಲತಾಣ www.bcu.ac.inಗೆ ಭೇಟಿ ನೀಡಬಹುದು ಎಂದು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.