ಸೋಮವಾರ, ಫೆಬ್ರವರಿ 17, 2020
24 °C

ಆನಂದ್‌ ಸಿಂಗ್‌ಗೆ ಅರಣ್ಯ ಖಾತೆ: ಭುಗಿಲೆದ್ದ ವಿವಾದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ಅರಣ್ಯ ಸಚಿವ ಆನಂದ್‌ ಸಿಂಗ್‌ ವಿರುದ್ಧ ಅರಣ್ಯ ಕಾಯ್ದೆ ಉಲ್ಲಂಘನೆಯ ಎರಡು ಪ್ರಕರಣಗಳು ದಾಖಲಾಗಿರುವುದನ್ನು ಅವರು ತಮ್ಮ ಚುನಾವಣೆ ಸ್ಪರ್ಧೆಯ ಸಂದರ್ಭದಲ್ಲಿ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಗಣಿ ಮತ್ತು ಖನಿಜ (ಎಂಎಂಆರ್‌ಡಿ) ಕಾಯ್ದೆಯಡಿ ಅರಣ್ಯ ನಿಯಮಾವಳಿ ಉಲ್ಲಂಘಿಸಿರುವ ಪ್ರಕರಣದಲ್ಲಿ ದೂರು ದಾಖಲಾಗಿದೆ. ಇನ್ನೊಂದು ಪ್ರಕರಣದಲ್ಲಿ ಸಿಂಗ್‌ ವಿರುದ್ಧ ವಲಯ ಅರಣ್ಯಾಧಿಕಾರಿ ಪ್ರತ್ಯೇಕ ದೂರು ದಾಖಲಿಸಿರುವುದನ್ನು ಪ್ರಮಾಣಪತ್ರದಲ್ಲಿ ಉಲ್ಲೇಖಿಸಲಾಗಿದೆ. ಇದು ಈಗ ವಿವಾದಕ್ಕೆ ಕಾರಣವಾಗಿದ್ದು, ಸಾಮಾಜಿಕ ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ. ಅರಣ್ಯ ನಿಯಮ ಉಲ್ಲಂಘಿಸಿದವರಿಗೇ ಅರಣ್ಯ ಖಾತೆ ನೀಡಲಾಗಿದೆ ಎಂಬ ಟೀಕೆಗಳು ಕೇಳಿ ಬಂದಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು