ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೊಮ್ಮನಹಳ್ಳಿ | ನಕಲಿ ದಾಖಲೆ ಸೃಷ್ಟಿಸುವ ಜಾಲ ಪತ್ತೆ: 9 ಕಾರುಗಳ ವಶ

Published 27 ಜೂನ್ 2024, 16:30 IST
Last Updated 27 ಜೂನ್ 2024, 16:30 IST
ಅಕ್ಷರ ಗಾತ್ರ

ಬೊಮ್ಮನಹಳ್ಳಿ: ಕಾರುಗಳನ್ನು ಬಾಡಿಗೆಗೆ ಪಡೆದು, ನಕಲಿ ದಾಖಲೆ ಸೃಷ್ಠಿಸಿ, ಮಾರಾಟ ಮತ್ತು ಗಿರವಿ ಇಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ₹ 90 ಲಕ್ಷ ಮೌಲ್ಯದ 9 ಕಾರುಗಳ ವಶಪಡಿಸಿಕೊಂಡಿದ್ದಾರೆ.

ಹುಳಿಮಾವು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳವು ಪ್ರಕರಣ ಬೆನ್ನತ್ತಿದ ಪೊಲೀಸರು ಶಿವಮೊಗ್ಗದಲ್ಲಿ ಒಬ್ಬನನ್ನು ವಶಕ್ಕೆ ಪಡೆದಿದ್ದರು. ಅವನನ್ನು ವಿಚಾರಿಸಿದಾಗ ಕಳವು ಮಾಡಿರುವ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಅವುಗಳ ಪೈಕಿ ಮೂರು ಕಾರುಗಳನ್ನು ಅಡಮಾನವಿಟ್ಟಿದ್ದು, ಆರು ಕಾರುಗಳನ್ನು ಮಾರಾಟ ಮಾಡಿರುವ ಮಾಹಿತಿಯನ್ನು ನೀಡಿದ್ದ.

ಅಡಮಾನವಿಟ್ಟಿದ್ದ ಮತ್ತು ಮಾರಾಟ ಮಾಡಿದ್ದ ವಿವಿಧ ಕಂಪನಿಗಳ 9 ಕಾರುಗಳನ್ನು ಪೋಲಿಸರು ವಶಪಡಿಸಿಕೊಂಡಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT