ಗುರುವಾರ , ಆಗಸ್ಟ್ 5, 2021
28 °C

ಮಾಜಿ ಕಾರ್ಪೋರೇಟರ್ ಹತ್ಯೆ ಪ್ರಕರಣ: ಆರೋಪಿಗಳ ಕಾಲಿಗೆ ಗುಂಡೇಟು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಛಲವಾದಿಪಾಳ್ಯ ವಾರ್ಡ್ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣದ ಆರೋಪಿಗಳು ಎನ್ನಲಾದ ಪೀಟರ್ ಹಾಗೂ ಸೂರ್ಯನನ್ನು ಪೊಲೀಸರು ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ.

ಪಶ್ಚಿಮ ವಿಭಾಗದ ಪೊಲೀಸರು, ಸಂಚಿನಲ್ಲಿ‌ ಭಾಗಿಯಾಗಿದ್ದರು ಎನ್ನಲಾದ ನಾಲ್ವರನ್ನು ವಶಕ್ಕೆ ಪಡೆದಿದ್ದರು. ಅವರು ನೀಡಿದ್ದ ಮಾಹಿತಿ ಆಧರಿಸಿ ಪ್ರಮುಖ ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿಸಿದ್ದರು.

ಇದನ್ನೂ ಓದಿ: 

ಫ್ಲವರ್ ಗಾರ್ಡನ್‌ನಲ್ಲಿರುವ ಕಚೇರಿ ಎದುರೇ ಗುರು ಮಾರಕಾಸ್ತ್ರಗಳಿಂದ ಹೊಡೆದು ಕೊಂದಿದ್ದರು. ತನಿಖೆಗೆ ಪೊಲೀಸರ ಮೂರು ವಿಶೇಷ ತಂಡಗಳನ್ನು ರಚಿಸಲಾಗಿತ್ತು.

ಅದರಂತೆ ಕಾಟನ್ ಪೇಟೆ ಹಾಗೂ ಉಪ್ಪಾರಪೇಟೆ ಇನ್‌ಸ್ಪೆಕ್ಟರ್ ನೇತೃತ್ವದ ತಂಡ, ಪೀಟರ್ ಹಾಗೂ ಸೂರ್ಯ ಬಂಧಿಸಲು ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಗೆ ಹೋಗಿತ್ತು.

ಪಿಎಸ್ಐ, ಕಾನ್‌ಸ್ಟೆಬಲ್ ಮೇಲೆ ಆರೋಪಿಗಳು ಹಲ್ಲೆಗೆ ಯತ್ನಿಸಿದ್ದರು. ಈ ವೇಳೆ ಆತ್ಮರಕ್ಷಣೆಗಾಗಿ ಇನ್‌ಸ್ಪೆಕ್ಟರ್, ಇಬ್ಬರ ಮೇಲೂ ಗುಂಡು ಹಾರಿಸಿದ್ದಾರೆ.

ಇದನ್ನೂ ಓದಿ: ಮಾಜಿ ಕಾರ್ಪೋರೇಟರ್ ರೇಖಾ ಹತ್ಯೆ: ಸಿ.ಸಿ.ಟಿ.ವಿ ತಿರುಗಿಸಿಟ್ಟಿದ್ದ ಆರೋಪಿಗಳು 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು