ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸವಾಲುಗಳಿಗೆ ಉತ್ತರಿಸುವ ಶಿಕ್ಷಣ ಅಗತ್ಯ’

ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡ ವೀರಪ್ಪ ಮೊಯಿಲಿ ಅಭಿಮತ
Last Updated 28 ಡಿಸೆಂಬರ್ 2019, 4:43 IST
ಅಕ್ಷರ ಗಾತ್ರ

ಬೆಂಗಳೂರು: ‘ಶಿಕ್ಷಣವು ಬೌದ್ಧಿಕ ಸಾಮರ್ಥ್ಯವನ್ನು ಹೆಚ್ಚಿಸುವ ಜತೆಗೆ ನಮ್ಮೆದುರಿನ ಜಾಗತಿಕ ಸವಾಲುಗಳನ್ನೂ ಎದುರಿಸುವ ಶಕ್ತಿಶಾಲಿ ಸಾಧನವಾಗಬೇಕು’ ಎಂದು ಕಾಂಗ್ರೆಸ್ ಮುಖಂಡ ವೀರಪ್ಪ ಮೊಯಿಲಿ ಅಭಿಪ್ರಾಯಪಟ್ಟರು.

ನಗರದಲ್ಲಿ ಶುಕ್ರವಾರ ಏರ್ಪಡಿಸಿದ್ದ ‘ದಿ ಕಮ್ಯುನಿಟಿ ಸೆಂಟರ್ ಗ್ರೂಪ್ ಆಫ್ ಎಜುಕೇಷನಲ್ ಇನ್‌ಸ್ಟಿಟ್ಯೂಷನ್ಸ್‌ನ ವಜ್ರ ಮಹೋತ್ಸವದಲ್ಲಿ ಅವರು ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿದರು.

‘ಬದಲಾವಣೆಯ ಆಲೋಚನೆಗಳನ್ನು ಬಿತ್ತುವ ಹಾಗೂ ನಿರಂತರ ಸಕಾರಾತ್ಮಕ ನಿಲುವುಗಳನ್ನು ಪಸರಿಸುವ ಶಿಕ್ಷಣ ಸದ್ಯದ ಸಂದರ್ಭಕ್ಕೆ ಅತ್ಯಗತ್ಯ. ಇಷ್ಟಾಗಿಯೂಜಗತ್ತಿನಪ್ರತಿಷ್ಠಿತ ಕಂಪನಿಗಳಲ್ಲಿ ಉನ್ನತ ಹುದ್ದೆಗಳನ್ನು ಭಾರತೀಯರು ಅಲಂಕರಿಸುತ್ತಿರುವುದುಸಮಾಧಾನಕರ ಸಂಗತಿ. ಆದರೆ, ಇದೀಗ ಜಾಗತಿಕ ಮಟ್ಟದಲ್ಲಿ ಉದ್ಯೋಗ ಸ್ಪರ್ಧೆ ಹೆಚ್ಚುತ್ತಿದೆ. ಇದರಿಂದಾಗಿ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಜತೆಗೆ ಕೌಶಲ ವೃದ್ಧಿಸಲೂ ಮುಂದಾಗಬೇಕು’ ಎಂದು ಹೇಳಿದರು.

ಸುಪ್ರೀಂ ಕೋರ್ಟಿನ ನಿವೃತ್ತ ಮುಖ್ಯನ್ಯಾಯಮೂರ್ತಿ ಎಂ.ಎನ್.ವೆಂಕಟಾಚಲಯ್ಯ, ‘ಶಿಕ್ಷಣ
ವ್ಯವಸ್ಥೆಯಲ್ಲಿ ಬದಲಾವಣೆ ತರುವ ಕೆಲಸವಾಗಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳು ಇದನ್ನು ಅರಿತು, ಗುಣಮಟ್ಟದ ಶಿಕ್ಷಣವನ್ನು ನೀಡಲು ಸಜ್ಜುಗೊಳ್ಳಬೇಕು. ವಿದ್ಯಾರ್ಥಿಗಳು ಪಠ್ಯದ ಶಿಕ್ಷಣವನ್ನು ಅಭ್ಯಸಿಸುವ ಜತೆಗೆ ಜೀವನದಲ್ಲಿ ಎದುರಾಗುವ ಸವಾಲುಗಳನ್ನೂ ಎದುರಿಸಲು ಅಣಿಯಾಗಬೇಕು’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT