ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾಹೀರಾತು ಅಳವಡಿಸಲು ಅನುಮತಿ ಬೇಡ

ನಗರಾಭಿವೃದ್ಧಿ ಇಲಾಖೆಗೆ ಮಾಜಿ ಮೇಯರ್‌ಗಳಿಂದ ಪತ್ರ
Last Updated 16 ಜನವರಿ 2021, 3:24 IST
ಅಕ್ಷರ ಗಾತ್ರ

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಜಾಹೀರಾತು ಫಲಕಗಳ ಅಳವಡಿಕೆಗೆ ಅನುಮತಿ ನೀಡದಂತೆ ಆಗ್ರಹಿಸಿ ಮಾಜಿ ಮೇಯರ್‌ಗಳಾದ ಪಿ.ಆರ್‌. ರಮೇಶ್‌, ಎಂ. ರಾಮಚಂದ್ರಪ್ಪ ಮತ್ತು ಜೆ. ಹುಚ್ಚಪ್ಪ ಅವರು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಶುಕ್ರವಾರ ಪತ್ರ ಬರೆದಿದ್ದಾರೆ.

‘ನಗರದಲ್ಲಿ ಜಾಹೀರಾತು ಫಲಕಗಳ ಅಳವಡಿಕೆಗೆ ಅನುಮತಿ ನೀಡುವಂತೆ ಪಾಲಿಕೆ ಆಯುಕ್ತರು ಪ್ರಸ್ತಾವ ಸಲ್ಲಿಸಿರುವ ಮಾಹಿತಿ ಲಭಿಸಿದೆ. ಚುನಾಯಿತ ಸದಸ್ಯರ ಆಡಳಿತ ಇಲ್ಲದಿರುವ ಸಂದರ್ಭದಲ್ಲಿ ಹಳೆಯ ನಿಯಮಗಳ ಆಧಾರದಲ್ಲಿ ಜಾಹೀರಾತು ಅಳವಡಿಕೆಗೆ ಅನುಮತಿ ನೀಡಬೇಡಿ’ ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.

ಜಾಹೀರಾತು ಫಲಕ ಅಳವಡಿಕೆಗೆ ಸಂಬಂಧಿಸಿದ ವಿವಾದ ನ್ಯಾಯಾಲಯದಲ್ಲಿದೆ. ಯಾವುದೇ ಸಂದರ್ಭದಲ್ಲಿ ತೀರ್ಪು ಪ್ರಕಟವಾಗುವ ಸಾಧ್ಯತೆ ಇದೆ. ಅದಕ್ಕೂ ಮೊದಲೇ ಜಾಹೀರಾತು ಫಲಕಗಳನ್ನು ಅಳವಡಿಸಲು ಅನುಮತಿ ನೀಡಬಾರದು ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT