ಬೆಂಗಳೂರು: ರಾಜ್ಯದ ವಿವಿಧ ಜಿಲ್ಲಾ ನ್ಯಾಯಾಲಯಗಳಲ್ಲಿ ನೌಕರಿ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸುತ್ತಿದ್ದ ಪ್ರಕರಣದಲ್ಲಿ, ಕೊಪ್ಪಳ ನಗರಸಭೆಯ ಮಾಜಿ ಸದಸ್ಯೆ ವಿಜಯಾ ಹಿರೇಮಠ್ ಸೇರಿದಂತೆ ಮತ್ತೆ ಆರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 8ಕ್ಕೆ ಏರಿಕೆ ಆಗಿದೆ.

ಕೊಪ್ಪಳ ನಗರಸಭೆ ಮಾಜಿ ಸದಸ್ಯೆ ವಿಜಯಾ ಹಿರೇಮಠ್, ಸಿದ್ದಲಿಂಗಯ್ಯ ಹಿರೇಮಠ್, ಚಿತ್ರದುರ್ಗದ ಜಿ.ಎಸ್.ವೆಂಕಟರೆಡ್ಡಿ, ಬೆಂಗಳೂರಿನ ವಿದ್ಯಾರಣ್ಯಪುರದ ನಿವಾಸಿ, ರಾಜಕೀಯ ಪಕ್ಷವೊಂದರ ಮುಖಂಡ ಎಂ. ತಿಪ್ಪೇಸ್ವಾಮಿ, ರಾಕೇಶ್ ಹಾಗೂ ಮಹೇಶ್ ಬಂಧಿತರು.

ಇದೇ ಪ್ರಕರಣದಲ್ಲಿ ಎರಡು ದಿನಗಳ ಹಿಂದೆ ಚಿಕ್ಕಮಗಳೂರಿನ ಜೈಸನ್ ಡಿಸೋಜಾ ಮತ್ತು ಲವೀನಾ ದಂಪತಿಯನ್ನು ಬಂಧಿಸಲಾಗಿತ್ತು.

ಆರೋಪಿಗಳಿಂದ ₹38 ಲಕ್ಷ ವಶಕ್ಕೆ ಪಡೆದುಕೊಳ್ಳಲಾಗಿದೆ. ಜಿಲ್ಲಾ ನ್ಯಾಯಾಲಯಗಳಲ್ಲಿ ಎಫ್ಡಿಎ, ಎಸ್ಡಿಎ ಹಾಗೂ ಚಾಲಕ ಕೆಲಸವನ್ನು ಕೊಡಿಸುವುದಾಗಿ ಆರೋಪಿಗಳು ನಂಬಿಸಿ ಹಣ ಪಡೆದು ವಂಚಿಸಿದ್ದರು. ಇದುವರೆಗೂ ನಡೆದ ತನಿಖೆಯಲ್ಲಿ 450ಕ್ಕೂ ಅಭ್ಯರ್ಥಿಗಳಿಂದ ಆರೋಪಿಗಳು ಹಣ ಪಡೆದುಕೊಂಡಿದ್ದಾರೆ ಎಂಬುದು ಗೊತ್ತಾಗಿದೆ. ಹಣ ಕಳೆದುಕೊಂಡ ಅಭ್ಯರ್ಥಿಯೊಬ್ಬರು ನೀಡಿದ ದೂರು ಆಧರಿಸಿ ತನಿಖೆ ನಡೆಸಿದಾಗ ಆರೋಪಿಗಳ ಕೃತ್ಯ ಬಯಲಾಯಿತು ಎಂದು ಪೊಲೀಸರು ಹೇಳಿದರು.

ಉದ್ಯೋಗ ಆಕಾಂಕ್ಷಿಗಳಿಗೆ ಕೆಲಸ ಕೊಡಿಸುವ ಆಮಿಷವೊಡ್ಡಲು ಆರೋಪಿಗಳು ಮಧ್ಯವರ್ತಿಗಳನ್ನು ನೇಮಿಸಿಕೊಂಡಿದ್ದರು. ಆಕಾಂಕ್ಷಿಗಳಿಂದ ಆನ್ಲೈನ್, ನಗದು ರೂಪದಲ್ಲಿ ಹಣ ಪಡೆದುಕೊಂಡಿರುವುದು ತನಿಖೆ ವೇಳೆ ಗೊತ್ತಾಗಿದೆ ಎಂದು ಪೊಲೀಸರು ಹೇಳಿದರು.

ವಿವಿಧ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ: ಚಿಕ್ಕಬಳ್ಳಾಪುರ, ಯಲಹಂಕ ನ್ಯೂಟೌನ್, ಬೊಮ್ಮನಹಳ್ಳಿ, ಆರ್.ಟಿ.ನಗರ, ಗದಗದ ಸೆನ್, ಮಂಡ್ಯ ಜಿಲ್ಲೆ ಕೆಸ್ತೂರು, ಬ್ಯಾಟರಾಯನಪುರ, ಜಾಲಹಳ್ಳಿ, ಕೊಡಿಗೇಹಳ್ಳಿ, ಜ್ಞಾನಭಾರತಿ, ಮಂಗಳೂರು ಊರ್ವ, ಬಸವೇಶ್ವರನಗರ, ಗಂಗಮ್ಮನಗುಡಿ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದವು ಎಂದು ಮೂಲಗಳು ಹೇಳಿವೆ.

‘ನಿರುದ್ಯೋಗಿಗಳು, ಖಾಸಗಿ ಕಂಪನಿಗಳಲ್ಲಿ ಕಡಿಮೆ ಸಂಬಳಕ್ಕೆ ಕೆಲಸ ಮಾಡುತ್ತಿದ್ದವರನ್ನು ಗುರಿಯಾಗಿಸಿಕೊಂಡು ಆರೋಪಿಗಳು ವಂಚಿಸುತ್ತಿದ್ದರು. ಅಭ್ಯರ್ಥಿಗಳಿಂದ ₹10 ಲಕ್ಷದಿಂದ ₹25 ಲಕ್ಷದವರೆಗೆ ವಸೂಲಿ ಮಾಡುತ್ತಿದ್ದರು’ ಎಂದು ಸಿಸಿಬಿ ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.