ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಲಹಂಕ: ಬಾಲಕಿಯರ ವಸತಿ ನಿಲಯ ಕಟ್ಟಡಕ್ಕೆ ಶಂಕುಸ್ಥಾಪನೆ 

Published 10 ಡಿಸೆಂಬರ್ 2023, 16:22 IST
Last Updated 10 ಡಿಸೆಂಬರ್ 2023, 16:22 IST
ಅಕ್ಷರ ಗಾತ್ರ

ಯಲಹಂಕ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಉಪನಗರದಲ್ಲಿ ₹ 1 ಕೋಟಿ ವೆಚ್ಛದಲ್ಲಿ ಹಿಂದುಳಿದ ವರ್ಗದ ಬಾಲಕಿಯರ ವಸತಿನಿಲಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಸ್‌.ಆರ್‌. ವಿಶ್ವನಾಥ್‌ ಗುದ್ದಲಿಪೂಜೆ ನೆರವೇರಿಸಿದರು.

ಈ ವಿದ್ಯಾರ್ಥಿನಿಲಯದಲ್ಲಿ ಹೊರಜಿಲ್ಲೆಗಳಿಂದ ಬಂದಿರುವ ವಿದ್ಯಾರ್ಥಿನಿಯರೇ ಹೆಚ್ಚಿನ ಸಂಖ್ಯೆಯಲಿದ್ದು, ಅವರ ಸಂಖ್ಯೆಗೆ ಅನುಗುಣವಾಗಿ ಕೊಠಡಿಗಳಿಲ್ಲದೆ ಸಮಸ್ಯೆಯಾಗಿತ್ತು. ನೂತನ ಕಟ್ಟಡ ನಿರ್ಮಿಸಬೇಕೆಂಬ ಹಲವು ದಿನಗಳ ಬೇಡಿಕೆಯಂತೆ ಸಮಾಜಕಲ್ಯಾಣ ಇಲಾಖೆ ವತಿಯಿಂದ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಆರು ತಿಂಗಳ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. ಬಡಮಕ್ಕಳಿಗೆ ಅನುಕೂಲವಾಗಲಿದೆ ಎಂದು ಶಾಸಕರು ತಿಳಿಸಿದರು.

ಗರಡಿ ಮನೆ ಉದ್ಘಾಟನೆ: ಬಿಬಿಎಂಪಿ ವತಿಯಿಂದ ಉಪನಗರ 4ನೇ ಹಂತದ ವಿವೇಕಾನಂದ ಉದ್ಯಾನದ ಪಕ್ಕದಲ್ಲಿ ₹ 75 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಗರಡಿ ಮನೆಯಲ್ಲಿ ಮಟ್ಟಿ ಕುಸ್ತಿ ಹಾಗೂ ಮ್ಯಾಟ್‌ ಕುಸ್ತಿ ತರಬೇತಿಗಾಗಿ ನಿರ್ಮಿಸಿರುವ ಕೊಠಡಿಗಳನ್ನು ಉದ್ಘಾಟಿಸಲಾಯಿತು.

ಬಿಬಿಎಂಪಿ ಮಾಜಿ ಸದಸ್ಯರಾದ ಎಂ. ಸತೀಶ್‌, ಎಂ. ಮುನಿರಾಜು, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಲಕ್ಷ್ಮಣ ರೆಡ್ಡಿ, ಬಿಬಿಎಂಪಿ ಕಾರ್ಯನಿರ್ವಾಹಕ ಎಂಜಿನಿಯರ್‌ ಸುಧಾಕರ ರೆಡ್ಡಿ, ಬೆಂಗಳೂರು ಉತ್ತರ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಿ.ಒ. ರಮೇಶ್‌, ಉಸ್ತಾದ್‌ ಪೈಲ್ವಾನ್‌ ಆರ್‌. ಆನಂದ್‌ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT