ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ: ಪೋಸ್ಟ್‌ಕಾರ್ಡ್‌ ಬಿಡುಗಡೆ

Published 8 ಮಾರ್ಚ್ 2024, 16:34 IST
Last Updated 8 ಮಾರ್ಚ್ 2024, 16:34 IST
ಅಕ್ಷರ ಗಾತ್ರ

ಬೆಂಗಳೂರು: ಸಂವಿಧಾನ ಸಭೆಯ 15 ಮಹಿಳಾ ಸದಸ್ಯರ ಸಚಿತ್ರ ಪೋಸ್ಟ್‌ಕಾರ್ಡ್‌ಗಳನ್ನು ‘ನಮ್ಮ ಸಂವಿಧಾನದ ಸಂಸ್ಥಾಪಕ ತಾಯಂದಿರು’ ಎಂಬ ಹೆಸರಿನಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಭಾರತೀಯ ಅಂಚೆ ಇಲಾಖೆ ಕರ್ನಾಟಕ ವೃತ್ತದಿಂದ ಶುಕ್ರವಾರ ಬಿಡುಗಡೆ ಮಾಡಲಾಯಿತು.

389 ಸದಸ್ಯರಿದ್ದ ಸಂವಿಧಾನ ಸಭೆಯಲ್ಲಿ ಮಹಿಳೆಯರ ಪ್ರಮಾಣ ಶೇ 3.15 ಮಾತ್ರ ಇತ್ತು.  ಗುಣಾತ್ಮಕವಾಗಿ ಅವರ ಕೊಡುಗೆ ಶ್ಲಾಘನೀಯವಾದುದು. ಉತ್ತರ ಪ್ರದೇಶದ ನಾಲ್ವರು, ಕೇರಳದ ಮೂವರು, ಆಂಧ್ರಪ್ರದೇಶ, ತೆಲಂಗಾಣ, ಪೂರ್ವ ಬಂಗಾಳ (ಬಾಂಗ್ಲಾದೇಶ), ಪಶ್ಚಿಮ ಬಂಗಾಳ, ಅಸ್ಸಾಂ, ಗುಜರಾತ್, ಹರಿಯಾಣ ಮತ್ತು ಪಂಜಾಬ್‌ನಿಂದ ತಲಾ ಒಬ್ಬರು ಭಾಗಿಯಾಗಿದ್ದರು ಎಂದು ಕರ್ನಾಟಕ ವೃತ್ತದ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಎಸ್. ರಾಜೇಂದ್ರ ಕುಮಾರ್ ತಿಳಿಸಿದರು.

₹300 ಮತ್ತು ₹400 ಮುಖಬೆಲೆಯ ಈ ಅಂಚೆ ಕಾರ್ಡ್‌ಗಳು ಮೈಸೂರು, ಮಂಗಳೂರು, ಬೆಳಗಾವಿ ಮತ್ತು ಬೆಂಗಳೂರು ಅಂಚೆ ಕಚೇರಿಗಳಲ್ಲಿ ಲಭ್ಯವಿವೆ.

ಅಂಚೆ ಸೇವೆ ನಿರ್ದೇಶಕಿ ಕೈಯಾ ಅರೋರಾ, ಏರೋ ಸ್ಪೇಸ್ ಎಂಜಿನಿಯರ್ ವಿನಯ್ ಕುಮಾರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT