ಶುಕ್ರವಾರ, 22 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನಲ್ಲಿ ನಾಲ್ಕು ದಿನ ಉತ್ತಮ ಮಳೆ

Published 6 ಜುಲೈ 2023, 0:17 IST
Last Updated 6 ಜುಲೈ 2023, 0:17 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಗುರುವಾರದಿಂದ ನಾಲ್ಕು ದಿನಗಳ ಕಾಲ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಸಾಮಾನ್ಯವಾಗಿ ದಿನವಿಡೀ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಮೇಲ್ಮೈ ಸುಳಿಗಾಳಿ ಬೀಸಲಿದೆ. ಜತೆ‌ಗೆ ಮಳೆಯೂ ಆಗಲಿದೆ ಎಂದು ತಿಳಿಸಿದೆ.

ಬುಧವಾರ ದಿನವಿಡೀ ಮೋಡ ಕವಿದ ವಾತಾವರಣ ಇತ್ತು. ಬೆಳಿಗ್ಗೆ ನಾಗಸಂದ್ರ, ಯಲಹಂಕ, ಸುಂಕದಕಟ್ಟೆ, ರಿಂಗ್‌ ರಸ್ತೆ, ದಾಸರಹಳ್ಳಿ ಭಾಗದಲ್ಲಿ ಸಾಧಾರಣ ಮಳೆಯಾಗಿದೆ. ಮಧ್ಯಾಹ್ನ ಮೂರು ಗಂಟೆಯ ವೇಳೆಯಲ್ಲಿ ಅಶೋಕನಗರ, ಹಲಸೂರು, ಟ್ರಿನಿಟಿ, ಎಂ.ಜಿ.ರಸ್ತೆ, ಶಾಂತಿನಗರ, ಕಲ್ಯಾಣ ನಗರ, ಚಾಮರಾಜಪೇಟೆ, ಶಿವಾಜಿನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT