ಸೋಮವಾರ, ಜುಲೈ 4, 2022
21 °C

ಕತಾರ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ನಾಲ್ವರು ಮಹಿಳೆಯರ ರಕ್ಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಉದ್ಯೋಗ ಅರಸಿ ಕತಾರ್‌ಗೆ ಹೋಗಿ ಸಂಕಷ್ಟಕ್ಕೆ ಸಿಲುಕಿದ್ದ ದೇಶದ ನಾಲ್ವರು ಮಹಿಳೆಯರನ್ನು ನಗರದ ವಲಸಿಗರ ರಕ್ಷಣಾ ಕೇಂದ್ರದ ಅಧಿಕಾರಿಗಳು ರಕ್ಷಿಸಿದ್ದು, ಅವರೆಲ್ಲರನ್ನೂ ಸುರಕ್ಷಿತವಾಗಿ ಕರೆತಂದಿದ್ದಾರೆ.

‘ಶುಶ್ರೂಷಕಿ ಹಾಗೂ ಶಿಕ್ಷಕಿಯರಾಗಿ ಕೆಲಸ ಮಾಡಲು ಹಾಸನ, ಹೈದರಾಬಾದ್, ಕೇರಳದ ಮಹಿಳೆಯರು ಏಜೆನ್ಸಿಯೊಂದರ ಮೂಲಕ ಕತಾರ್‌ಗೆ ಹೋಗಿದ್ದರು. ಅವರನ್ನು ಕತಾರ್ ನಿವಾಸಿಯೊಬ್ಬರು ಮನೆಯಲ್ಲಿಟ್ಟುಕೊಂಡಿದ್ದರು. ಮನೆ ಕೆಲಸ ಮಾಡುವಂತೆ
ಒತ್ತಾಯಿಸಿದ್ದರು’ ಎಂದು ಮೂಲಗಳು ತಿಳಿಸಿವೆ.

‘ಮಹಿಳೆಯರು ಮನೆ ಕೆಲಸ ಮಾಡಲು ನಿರಾಕರಿಸಿದ್ದರು. ಅದೇ ಕಾರಣಕ್ಕೆ ಅವರನ್ನು ಗೋದಾಮಿನಲ್ಲಿ ಅಕ್ರಮ ಬಂಧನದಲ್ಲಿಟ್ಟು ಊಟ ನೀಡದೇ ಹಿಂಸಿಸಲಾಗಿತ್ತು. ಅಲ್ಲಿಂದ ತಪ್ಪಿಸಿಕೊಂಡಿದ್ದ ಮಹಿಳೆಯರು, ಸ್ಥಳೀಯ ಪೊಲೀಸ್ ಠಾಣೆಗೆ ವಿಷಯ ತಿಳಿಸಿದ್ದರು.’

‘ಭಾರತೀಯ ರಾಯಭಾರ ಕಚೇರಿ ಸಂಪರ್ಕಿಸಿದ್ದ ಪೊಲೀಸರು, ಮಹಿಳೆಯರ ಬಗ್ಗೆ ಮಾಹಿತಿ ನೀಡಿದ್ದರು. ಇತ್ತ, ಮಹಿಳೆಯರ ಪೋಷಕರು ಸಹ ಕೋರಮಂಗಲದಲ್ಲಿರುವ ವಲಸಿಗರ ರಕ್ಷಣಾ ಕೇಂದ್ರಕ್ಕೆ ದೂರು ನೀಡಿದ್ದರು. ಕೇಂದ್ರದ ಅಧಿಕಾರಿಗಳೇ ಮಹಿಳೆಯರನ್ನು ವಾಪಸು ಕರೆದುಕೊಂಡು ಬಂದು ಅವರ ಮನೆಗಳಿಗೆ ಕಳುಹಿಸಿದ್ದಾರೆ’ ಎಂದು ಮೂಲಗಳು ಹೇಳಿವೆ.

ನೂತನ ಕೇಂದ್ರ: ‘ವಿದೇಶದಲ್ಲಿ ಸಂಕಷ್ಟಕ್ಕೆ ಸಿಲುಕುವ ದೇಶದ ಪ್ರಜೆಗಳನ್ನು ಸುರಕ್ಷಿತವಾಗಿ ವಾಪಸು ಕರೆ ತರುವ ಉದ್ದೇಶದಿಂದ ಕೋರಮಂಗಲದಲ್ಲಿ ವಲಸಿಗರ ರಕ್ಷಣಾ ಕೇಂದ್ರ ಸ್ಥಾಪಿಸಲಾಗಿದೆ’ ಎಂದು ಕೇಂದ್ರದ ಅಧಿಕಾರಿಯೊಬ್ಬರು ಹೇಳಿದರು.

ನೂತನ ಕೇಂದ್ರ
‘ವಿದೇಶದಲ್ಲಿ ಸಂಕಷ್ಟಕ್ಕೆ ಸಿಲುಕುವ ದೇಶದ ಪ್ರಜೆಗಳನ್ನು ಸುರಕ್ಷಿತವಾಗಿ ವಾಪಸು ದೇಶಕ್ಕೆ ಕರೆತರುವ ಉದ್ದೇಶದಿಂದ ಕೋರಮಂಗಲದಲ್ಲಿ ನೂತನವಾಗಿ ವಲಸಿಗರ ರಕ್ಷಣಾ ಕೇಂದ್ರ ಸ್ಥಾಪಿಸಲಾಗಿದೆ’ ಎಂದು ಕೇಂದ್ರದ ಅಧಿಕಾರಿಯೊಬ್ಬರು ಹೇಳಿದರು.  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು