ಬೆಂಗಳೂರು: ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಸಂತೋಷ್ ಕುಮಾರ್ ಎಂಬುವರಿಗೆ ತಿರುಪತಿ ವೆಂಕಟೇಶ್ವರ ದೇಗುಲದಲ್ಲಿ ಅರ್ಚನೆಗೆ ಆನ್‌ಲೈನ್ ಮೂಲಕ ಟಿಕೆಟ್ ಕೊಡಿಸುವುದಾಗಿ ಹೇಳಿ ಅಪರಿಚಿತ ವ್ಯಕ್ತಿ ಯೊಬ್ಬ ₹25 ಸಾವಿರ ಪಡೆದು ವಂಚನೆ ಮಾಡಿದ್ದಾನೆ.
ಸಂತೋಷ್ ಅವರು ಟಿಟಿಡಿ ವೆಬ್‌ಸೈಟ್ ಪರಿಶೀಲನೆ ನಡೆಸುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಯ ಪರಿಚಯವಾಗಿ, ಟಿಕೆಟ್ ಕೊಡಿಸುವುದಾಗಿ ಹೇಳಿ ತನ್ನ ಖಾತೆಗೆ ಹಣ ಹಾಕಿಸಿಕೊಂಡಿದ್ದಾನೆ. ಬಳಿಕ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾನೆ. ಈ ಬಗ್ಗೆ ಸಂತೋಷ್ ಅವರು ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದಾರೆ.