ಬೆಂಗಳೂರು: ಕೋವಿಡ್ ಪರೀಕ್ಷೆಯಲ್ಲಿ ಅಕ್ರಮ ನಡೆಸಿದ ಆರೋಪದ ಮೇರೆಗೆ ಯಲಹಂಕ ವಲಯದ ಕೊಡಿಗೆಹಳ್ಳಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ (ಪಿಎಚ್‌ಸಿ) ಇಬ್ಬರು ನೌಕರರನ್ನು ಬಿಬಿಎಂಪಿಯು ಸೇವೆಯಿಂದ ವಜಾ ಮಾಡಿದೆ. ಕೋವಿಡ್ ಪರೀಕ್ಷಾ ಕಾರ್ಯದ ಉಸ್ತುವಾರಿಯನ್ನು ಸಮರ್ಪಕವಾಗಿ ನಿರ್ವಹಿಸದ ಈ ಪಿಎಚ್‌ಸಿಯ ಆರೋಗ್ಯ ವೈದ್ಯಾಧಿಕಾರಿ ಡಾ.ಪ್ರೇಮಾನಂದ ಅವರನ್ನು ಪಾಲಿಕೆ ಅಮಾನತು ಮಾಡಿದೆ.

ಕೊಡಿಗೆಹಳ್ಳಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಕೋವಿಡ್ ಪರೀಕ್ಷೆಗಾಗಿ ಜನರ ಮೂಗಿನ ದ್ರವ ಸಂಗ್ರಹಿಸುವ ಕೆಲಸಕ್ಕೆ ತಾತ್ಕಾಲಿಕ ನೆಲೆಯಲ್ಲಿ ನೇಮಕಗೊಂಡಿದ್ದ ನಾಗರಾಜು ಹಾಗೂ ಹೇಮಂತ್ ವಜಾಗೊಂಡವರು.

ಕೊಡಿಗೆಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿನೌಕರರಿಬ್ಬರು ಕೋವಿಡ್ ಪರೀಕ್ಷೆಗಾಗಿ ಬಂದ ವ್ಯಕ್ತಿಗಳ ಮೂಗಿನ ದ್ರವವನ್ನು ಕಡ್ಡಿಯಿಂದ ಸಂಗ್ರಹಿಸದೆಯೇ, ಆ ಕಡ್ಡಿಗಳನ್ನು ವೈರಾಣು ರವಾನೆ ಪರಿಕರದಲ್ಲಿ (ವಿಟಿಎಂ) ಜೋಡಿಸುವ ಮೂಲಕ ವಂಚನೆ ನಡೆಸುತ್ತಿದ್ದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇದನ್ನು ಪರಿಶೀಲಿಸಿದಾಗ ಮೂಗಿನ ದ್ರವ ಸಂಗ್ರಹಿಸುವ ಸಿಬ್ಬಂದಿ ತಪ್ಪೆಸಗಿರುವುದು ಮೇಲ್ನೋಟಕ್ಕೆ ಸಾಬೀತಾಗಿತ್ತು.

ಎಫ್‌ಐಆರ್ ದಾಖಲು

‘ನಾಗರಾಜು ಹಾಗೂ ಹೇಮಂತ್ ತಾವು ಪಿಎಚ್‌ಸಿಯಲ್ಲಿ ಇಲ್ಲದೇ ಇದ್ದಾಗ ಕೋವಿಡ್ ಪರೀಕ್ಷೆ ನಡೆಸುವಾಗ ಅಕ್ರಮ ನಡೆಸಿದ್ದಾರೆ’ ಎಂದು ಆರೊಪಿಸಿ ಆರೋಗ್ಯ ವೈದ್ಯಾಧಿಕಾರಿ ಡಾ.ಪ್ರೇಮಾನಂದ ಅವರು ಕೊಡಿಗೇಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎಫ್‌ಐಆರ್ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.