ಬುಧವಾರ, ಮಾರ್ಚ್ 29, 2023
30 °C

ಮುಖಂಡರ ಹೆಸರು ಬಳಸಿ ವಂಚನೆ: ಎಚ್ಚರ ವಹಿಸಲು ವಿಜಯೇಂದ್ರ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಸಾರ್ವಜನಿಕ ಕ್ಷೇತ್ರದಲ್ಲಿ ಮುಖಂಡರ ಹೆಸರನ್ನು ದುರ್ಬಳಕೆ ಮಾಡಿಕೊಂಡು ವಂಚಿಸುವವರ ಬಗ್ಗೆ ಎಚ್ಚರಿಕೆ ಇರಬೇಕು’ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೆಂದ್ರ ಹೇಳಿದ್ದಾರೆ.

‘ಸಾರ್ವಜನಿಕ ಕ್ಷೇತ್ರದಲ್ಲಿ ನೆರವು ಕೇಳುವವರನ್ನು ಅನುಮಾನಿಸಿ ನೋಡಲಾಗದು. ಹಾಗೆಂದು ಎಚ್ಚರ ತಪ್ಪಲಾಗದು. ಹೆಸರು ದುರುಪಯೋಗಪಡಿಸಿಕೊಂಡು ಕಳಂಕ ಹಚ್ಚುವ ವಂಚಕರಿಂದ ತೊಂದರೆ ತುಸು ಹೆಚ್ಚು ಬಾಧಿಸುತ್ತಿದೆ’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

‘ಸಾರ್ವಜನಿಕರು ಮೋಸ ಹೋಗಬಾರದು ಎಂಬ ಕಾರಣಕ್ಕೆ ಮತ್ತು ವ್ಯಕಿತ್ವ ರಕ್ಷಣೆಗಾಗಿ ಅನಿವಾರ್ಯವಾಗಿ ನೀಡಿದ ದೂರಿನ ಮೇಲೆ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ’ ಎಂದು ವಿಜಯೇಂದ್ರ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು