ಪರೀಕ್ಷೆ: ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ

ಬೆಂಗಳೂರು: ವೃತ್ತಿಪರ/ ಪದವಿ/ ಸ್ನಾತಕೋತ್ತರ ಹಾಗೂ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳು ಪರೀಕ್ಷಾ ದಿನಾಂಕಗಳಂದು ಬಿಎಂಟಿಸಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಬಿಎಂಟಿಸಿ ಪ್ರಕಟಣೆ ತಿಳಿಸಿದೆ.
ಎಲ್ಲ ವೃತ್ತಿಪರ/ ಪದವಿ/ ಸ್ನಾತಕೋತ್ತರ ವಿದ್ಯಾರ್ಥಿಗಳು ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಪರೀಕ್ಷಾ ದಿನಾಂಕಗಳಂದು ಸಂಸ್ಥೆಯ ವಿದ್ಯಾರ್ಥಿ ಪಾಸಿನೊಂದಿಗೆ (2019-20ನೇ ಸಾಲಿನ), ಪರೀಕ್ಷೆಯ ಪ್ರವೇಶ ಪತ್ರ ತೋರಿಸಿ ಸಂಚರಿಸಬಹುದು. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳು ಪ್ರವೇಶ ಪತ್ರ ತೋರಿಸಿ ಪ್ರಯಾಣಿಸಬಹುದು ಎಂದು ಸಂಸ್ಥೆ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.