ಶುಕ್ರವಾರ, ಜನವರಿ 21, 2022
30 °C

21ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ (ಕೆಪಿಸಿಸಿ) ವೈದ್ಯಕೀಯ ಘಟಕವು ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಂಡಿದೆ.

‘ಇದೇ 21ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 2 ಗಂಟೆವರೆಗೂ ನಡೆಯುವ ಈ ಶಿಬಿರದಲ್ಲಿ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೊ ಆಸ್ಪತ್ರೆ ಹಾಗೂ ಜೆಪಿ ನಗರದ ಶೇಖರ್‌ ನೇತ್ರಾಲಯದ ಹಿರಿಯ ವೈದ್ಯರು ಭಾಗವಹಿಸಲಿದ್ದಾರೆ’ ಎಂದು ವೈದ್ಯಕೀಯ ಘಟಕದ ಪ್ರಧಾನ ಕಾರ್ಯದರ್ಶಿ ಡಾ.ಶಂಕರ ದ್ವಾರಕನಾಥ್‌ ಬೆಳ್ಳೂರ್‌ ತಿಳಿಸಿದ್ದಾರೆ.

ಬನಶಂಕರಿ 1ನೇ ಹಂತದಲ್ಲಿರುವ ಬ್ಯಾಂಕ್‌ ಕಾಲೊನಿ ಬಸ್‌ನಿಲ್ದಾಣದ ಹಿಂಭಾಗದಲ್ಲಿರುವ ಕೆಪಿಸಿಸಿ ಬೆಂಗಳೂರು ದಕ್ಷಿಣ ವಿಭಾಗದ ವೈದ್ಯಕೀಯ ಘಟಕದ ಕಚೇರಿ ಆವರಣದಲ್ಲಿ ಶಿಬಿರ ನಡೆಯಲಿದೆ. 

ಹೆಸರು ನೋಂದಾಯಿಸಲು 96068 09309ಗೆ ಕರೆ ಮಾಡಬಹುದು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು