ಗುರುವಾರ , ಮೇ 13, 2021
16 °C

ಶ್ರೀ ವೀರಭದ್ರಸ್ವಾಮಿ ಇಂಗ್ಲಿಷ್‌ ಮಾಧ್ಯಮ ಶಾಲೆ: ಉಚಿತ ವಸತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ವಿಭೂತಿಪುರ ವೀರಸಿಂಹಾಸನ ಸಂಸ್ಥಾನ ಮಠ ನಡೆಸುವ ಶ್ರೀ ವೀರಭದ್ರಸ್ವಾಮಿ ಇಂಗ್ಲಿಷ್‌ ಮಾಧ್ಯಮ ವಸತಿ ಶಾಲೆಯ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದೆ. ಪ್ರವೇಶ ಉಚಿತವಾಗಿದ್ದು, ಅರ್ಹ ವಿದ್ಯಾರ್ಥಿಗಳಿಂದ (ಬಾಲಕರು ಮಾತ್ರ) ಅರ್ಜಿ ಆಹ್ವಾನಿಸಲಾಗಿದೆ. 

6ರಿಂದ 10ನೇ ತರಗತಿಗಳಿಗೆ ಇಂಗ್ಲಿಷ್‌ ಮಾಧ್ಯಮದಲ್ಲಿ ಅಧ್ಯಯನ ಮಾಡಬಯಸುವ ಗ್ರಾಮೀಣ ಪ್ರದೇಶದ ಎಲ್ಲ ವರ್ಗದ ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುತ್ತದೆ. ಪ್ರವೇಶ ಪರೀಕ್ಷೆಯು ಇದೇ 25ರಂದು ಬೆಳಿಗ್ಗೆ 11ಕ್ಕೆ ಶ್ರೀಮಠದಲ್ಲಿ ನಡೆಯಲಿದೆ.

‘ನಗರದಲ್ಲಿರುವ ಅತ್ಯಂತ ಪ್ರಾಚೀನ ವೀರಶೈವ ಮಠ ನಮ್ಮದು. ಅಂದಿನಿಂದಲೂ ಶ್ರೀಮಠವು ಧಾರ್ಮಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಸೇವೆ ಸಲ್ಲಿಸುತ್ತಿದೆ. ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಉದ್ದೇಶದೊಂದಿಗೆ ಶಾಲೆಯು ಕಾರ್ಯನಿರ್ವಹಿಸುತ್ತಿದೆ’ ಎಂದು ಮಠದ ಅಧ್ಯಕ್ಷ ಡಾ. ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ.

ಶ್ರೀಮಠದ ಆವರಣದಲ್ಲಿರುವ ಸುಸಜ್ಜಿತವಾದ ಕಟ್ಟಡದಲ್ಲಿ ಕಂಪೂಟರ್, ಯೋಗ, ಸಂಗೀತ ಮತ್ತು ಕ್ರೀಡಾ ಶಿಕ್ಷಣವನ್ನೊಳಗೊಂಡ ಈ ಶಾಲೆಯನ್ನು 2009ರಿಂದ ಪ್ರಾರಂಭಿಸಲಾಗಿದೆ. 

ವಿದ್ಯಾರ್ಥಿಗಳು ತಮ್ಮ ಇತ್ತೀಚಿನ ಎರಡು ಭಾವಚಿತ್ರ, ಬಿಪಿಎಲ್ ಪಡಿತರ ಚೀಟಿ ಮತ್ತು ಆಧಾರ್ ಗುರುತಿನ ಚೀಟಿಯೊಂದಿಗೆ ನೇರವಾಗಿ ಪ್ರವೇಶ ಪರೀಕ್ಷೆಗೆ ಹಾಜರಾಗಬಹುದು.

ವಿವರಗಳಿಗೆ, 080-25237234, 9611033428.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು