ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ

Last Updated 22 ಸೆಪ್ಟೆಂಬರ್ 2020, 16:54 IST
ಅಕ್ಷರ ಗಾತ್ರ

ಬೆಂಗಳೂರು: ಐಎಎಸ್ ಪರೀಕ್ಷೆ ಬರೆಯುವ ಬ್ರಾಹ್ಮಣ ಸಮುದಾಯದ ಅಭ್ಯರ್ಥಿಗಳಿಗೆಕರ್ನಾಟಕ ಸರ್ಕಾರ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ಉಚಿತ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಯುಪಿಎಸ್‍ಸಿ ಹಾಗೂ ಕೆಪಿಎಸ್‍ಸಿ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ತರಬೇತಿ ನೀಡಲಾಗುವುದು.

ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲುhttps://ksbdb.spogworks.com/coachingapp/web/ ಅನ್ನು ಬಳಸಬಹುದು. ಅರ್ಜಿ ಸಲ್ಲಿಸಲು ಸೆ.30 ಕೊನೆಯ ದಿನ ಎಂದು ಮಂಡಳಿಯ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಳಾಸ: ಕರ್ನಾಟಕ ಸರ್ಕಾರ ಬ್ರಾಹ್ಮಣ ಅಭಿವೃದ್ಧಿ ಮಂಡಳಿ, ಅರವಿಂದ ಭವನ, ಮಿಥಿಕ್ ಸೊಸೈಟಿ ಆವರಣ, ನೃಪತುಂಗ ರಸ್ತೆ.

ಸಂಪರ್ಕ: 080-29605888 ಅಥವಾ ಇಮೇಲ್:coach4ias.ksbdb@karnataka.gov.in

---

27ಕ್ಕೆ ಉಪನ್ಯಾಸ, ಪುಸ್ತಕ ಬಿಡುಗಡೆ

ಬೆಂಗಳೂರು: ಬಿಎಂಶ್ರೀ ಪ್ರತಿಷ್ಠಾನದ ವತಿಯಿಂದ ಕೆ.ರಾಜೇಶ್ವರಿ ದೊಡ್ಡರಂಗೇಗೌಡ ಸಂಸ್ಮರಣ ದತ್ತಿ ಉಪನ್ಯಾಸ ಹಾಗೂ 'ಜಡ್ಜ್ ಮೆಂಟ್' ಕಥಾ ಸಂಕಲನ ಬಿಡುಗಡೆ ಕಾರ್ಯಕ್ರಮವನ್ನು ಸೆ.27ರಂದು ಸಂಜೆ 4.30ಕ್ಕೆ ಹಮ್ಮಿಕೊಂಡಿದೆ.

'ರಾಜೇಶ್ವರಿಗೌಡರ ಸಣ್ಣಕಥೆಗಳು' ಕುರಿತು ವಿಮರ್ಶಕಿ ಎಂ.ಎಸ್.ಆಶಾದೇವಿ ಉಪನ್ಯಾಸ ನೀಡಲಿದ್ದಾರೆ.

ವಿಳಾಸ:ಎಂವಿಸೀ ಸಭಾಂಗಣ, ಬಿಎಂಶ್ರೀ ಕಲಾಭವನ, ಎನ್.ಆರ್.ಕಾಲೊನಿ.
--

ಇಂದು ಪ್ರತಿಭಟನಾ ಧರಣಿ

ಬೆಂಗಳೂರು: ನ್ಯಾ.ಎ.ಜೆ.ಸದಾಶಿವ ಆಯೋಗ ಹಾಗೂ ನ್ಯಾ.ಎಚ್.ಎನ್.ನಾಗಮೋಹನ್‍ದಾಸ್ ಆಯೋಗಗಳ ವರದಿಗಳನ್ನು ಬಹಿರಂಗ ಚರ್ಚೆಗೆ ಒಳಪಡಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕದ ದಲಿತ ಹಕ್ಕುಗಳ ಸಮಿತಿಯುಮೌರ್ಯ ವೃತ್ತದಲ್ಲಿ ಸೆ.23ರಂದು ಬೆಳಿಗ್ಗೆ 11.30ಕ್ಕೆ ಧರಣಿ ಹಮ್ಮಿಕೊಂಡಿದೆ.

'ಜನಸಂಖ್ಯೆ ಆಧಾರದಲ್ಲಿ ಒಳಮೀಸಲಾತಿ ಜಾರಿಯಾಗಬೇಕು. ದೌರ್ಜನ್ಯ ತಡೆ ಕಾಯ್ದೆ ಬಲಪಡಿಸಬೇಕು. ಭೂಸುಧಾರಣೆ ಕಾಯ್ದೆ ವಾಪಸ್ ಪಡೆಯಬೇಕು' ಎಂದು ಸಮಿತಿಯ ಸಂಚಾಲಕ ಗೋಪಾಲಕೃಷ್ಣ ಹರಳಹಳ್ಳಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT