ಬೆಂಗಳೂರು: ಸಂಪಿಗೆಹಳ್ಳಿಯ 80 ಅಡಿ ರಸ್ತೆ ಸಮೀಪದ ಖಾಲಿ ಪ್ರದೇಶದಲ್ಲಿ ಶುಕ್ರವಾರ ತಡರಾತ್ರಿ ಪಾರ್ಟಿ ನಡೆಸುತ್ತಿದ್ದ ಸ್ನೇಹಿತರೇ, ಯುವಕನ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಪರಾರಿಯಾಗಿದ್ದಾರೆ.

ಪುಷ್ಪರಾಜ್(27) ಮೃತ ಕಾರ್ಮಿಕ. ‘ಖಾಲಿ ಜಾಗದ ಶೆಡ್ನಲ್ಲಿ ಕೃತ್ಯ ಎಸಗಿ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಆರೋಪಿಗಳ ಸುಳಿವು ಸಿಕ್ಕಿದ್ದು ಶೋಧ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.

‘ಕೊಲೆಯಾದ ಪುಷ್ಪರಾಜ್ ಟೈಲ್ಸ್ ಕೆಲಸ ಮಾಡುತ್ತಿದ್ದರು. ಶುಕ್ರವಾರ ರಾತ್ರಿ ಸ್ನೇಹಿತರ ಜತೆಗೆ ಮದ್ಯದ ಪಾರ್ಟಿ ನಡೆಸುತ್ತಿದ್ದರು. ಮದ್ಯದ ಅಮಲಿನಲ್ಲಿ ಸ್ನೇಹಿತರ ನಡುವೆ ಗಲಾಟೆಯಾಗಿದೆ. ಆಗ ಪುಷ್ಪರಾಜ್ ಅವರನ್ನು ಕೊಲೆ ಮಾಡಲಾಗಿದೆ. ಶನಿವಾರ ಸಂಜೆ ಪೊದೆಯಲ್ಲಿ ಮೃತದೇಹ ಪತ್ತೆಯಾಗಿದೆ. ಕೊಲೆಯಾದ ವ್ಯಕ್ತಿಯ ಸಹೋದರ ದೂರು ನೀಡಿದ್ದು, ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.

ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.